ಅತಿಕ್ ಹತ್ಯೆ: ಯುಪಿ ಪೊಲೀಸರಿಗೆ ಎನ್ಹೆಚ್ಆರ್ಸಿ ನೋಟೀಸ್
ಪ್ರಯಾಗ್ರಾಜ್, ಏ. ೧೮: ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬAಧಿಸಿದAತೆ ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗ (ಎನ್ಹೆಚ್ಆರ್ಸಿ) ಉತ್ತರ ಪ್ರದೇಶ ಪೊಲೀಸರಿಗೆ ನೋಟೀಸ್ ಜಾರಿ ಮಾಡಿದೆ. ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರು ಮತ್ತು ಪ್ರಯಾಗ್ರಾಜ್ನ ಪೊಲೀಸ್ ಆಯುಕ್ತರಿಗೆ ನೋಟೀಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ವರದಿಯನ್ನು ಆಯೋಗ ಕೇಳಿದೆ. ಹತ್ಯೆಗೆ ಕಾರಣವಾದ ಎಲ್ಲಾ ಅಂಶಗಳು, ಮೃತರಿಗೆ ಸಂಬAಧಿಸಿದ ವೈದ್ಯಕೀಯ ಪ್ರಮಾಣ ಪತ್ರ, ವಿಚಾರಣೆಯ ವರದಿ, ಮರಣೋತ್ತರ ಪರೀಕ್ಷೆಯ ವರದಿ, ಮರಣೋತ್ತರ ಪರೀಕ್ಷೆಯ ಸಿಡಿ, ವೀಡಿಯೋ, ಕ್ಯಾಸೆಟ್, ಮ್ಯಾಜಿಸ್ಟಿçಯಲ್ ವಿಚಾರಣೆ ವರದಿ ಸೇರಿದಂತೆ ಎಲ್ಲಾ ಮಾಹಿತಿಯನ್ನು ವರದಿಯಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ. ಶನಿವಾರ ರಾತ್ರಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ತಪಾಸಣೆಗಾಗಿ ಪೊಲೀಸ್ ಸಿಬ್ಬಂದಿ ಕರೆದೊಯ್ಯುತ್ತಿದ್ದಾಗ ಪ್ರಯಾಗರಾಜ್ನಲ್ಲಿರುವ ವೈದ್ಯಕೀಯ ಕಾಲೇಜಿನ ಹೊರಗೆ ಮೂವರು ಆರೋಪಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ನನಗೆ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ್ ಕಾರಣ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಏ. ೧೮: ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರ ಆರೋಪ ಮಾಡಿದ್ದಾರೆ. ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಎಂದಿದ್ದೆ, ಇಂದು ಅವರ ಹೆಸರನ್ನು ಬಹಿರಂಗಪಡಿಸುತ್ತಿದ್ದೇನೆ, ಬಿಜೆಪಿಯ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಂದಾಗಿ ನನಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈತಪ್ಪಿ ಹೋಯಿತು ಎಂದರು. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಇಂದು ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಜಗದೀಶ್ ಶೆಟ್ಟರ್, ಬಿ.ಎಲ್. ಸಂತೋಷ್ ಮತ್ತು ರಾಜ್ಯ ಬಿಜೆಪಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ನನ್ನ ವಿರುದ್ಧ ಬಿ.ಎಲ್. ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿತು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಕೋರ್ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರು ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕಿçÃನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದರೆ ಕೊನೆಗೆ ಟಿಕೆಟ್ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ಮೈಸೂರಿನಲ್ಲಿ ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ. ಹಾಗಾಗಿ ರಾಮದಾಸ್ಗೆ ಟಿಕೆಟ್ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ತಮಿಳುನಾಡಿನಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಭೀಕರ ಅಪಘಾತ; ಮಗು ಸೇರಿ ನಾಲ್ವರ ದುರ್ಮರಣ
ಕಡಬ, ಏ. ೧೮: ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕಡಬದ ಬಿಳಿನೆಲೆ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ಮಗು, ಮಹಿಳೆ ಮತ್ತು ಇಬ್ಬರು ಪುರುಷರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ತೂಫಾನ್ ವಾಹನದಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಸೀರೆ ಧರಿಸಿ ೪೨.೫ ಕಿ.ಮೀ. ಓಡಿದ ಒಡಿಯಾ ಮಹಿಳೆ
ಕೇಂದ್ರಪಾರ, ಏ. ೧೮: ಸಂಬಲ್ಪುರಿ ಕೈಮಗ್ಗದ ಸೀರೆ ಧರಿಸಿದ ಯು.ಕೆ. ಮೂಲದ ಒಡಿಯಾ ಮಹಿಳೆಯೊಬ್ಬರು ಭಾನುವಾರ ಮ್ಯಾಂಚೆಸ್ಟರ್ನಲ್ಲಿ ನಡೆದ ೪೨.೫ ಕಿ.ಮೀ. ಮ್ಯಾರಥಾನ್ ಓಡಿ ತನ್ನ ಸಹ ಓಟಗಾರರನ್ನು ವಿಸ್ಮಯಗೊಳಿಸಿದರು. ೪೧ ವರ್ಷದ ಮಧುಸ್ಮಿತಾ ಜೆನಾ ಮ್ಯಾರಥಾನ್ ಅನ್ನು ೪ ಗಂಟೆ ೫೦ ನಿಮಿಷಗಳಲ್ಲಿ ಪೂರ್ಣಗೊಳಿಸಿದರು. ಮ್ಯಾಂಚೆಸ್ಟರ್ನಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿರುವ ಅವರು ವಾಯುವ್ಯ ಇಂಗ್ಲೆAಡ್ ಒಡಿಯಾ ಸಮುದಾಯದ ಸಕ್ರಿಯ ಸದಸ್ಯರಾಗಿದ್ದಾರೆ. ಅವರು ಜಗತ್ತಿನಾದ್ಯಂತ ಅನೇಕ ಮ್ಯಾರಥಾನ್ಗಳು ಮತ್ತು ಅಲ್ಟಾç ಮ್ಯಾರಥಾನ್ಗಳಲ್ಲಿ ಭಾಗವಹಿಸಿದ್ದಾರೆ. ಆದರೆ ಮಧುಸ್ಮಿತಾ ಸೀರೆ ಉಟ್ಟು ಮ್ಯಾರಥಾನ್ನಲ್ಲಿ ಭಾಗವಹಿಸಿದ್ದು ಇದೇ ಮೊದಲು. ಸೀರೆ ಉಟ್ಟುಕೊಂಡು ಮ್ಯಾರಥಾನ್ ಓಡಿದ ಏಕೈಕ ವ್ಯಕ್ತಿ ನಾನು ಎಂದಿದ್ದಾರೆ. ಸೀರೆಯಲ್ಲಿ ತುಂಬಾ ಸಮಯ ಓಡುವುದು ಹೆಚ್ಚು ಕಷ್ಟ. ಆದರೆ ನಾನು ೪.೫೦ ಗಂಟೆಗಳಲ್ಲಿ ಪೂರ್ಣಗೊಳಿಸಿದ್ದು ನನಗೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.
ಸುಡಾನ್ ಸೇನಾ ಸಂಘರ್ಷ: ಕನಿಷ್ಟ ೧೮೦ ಸಾವು
ಖಾರ್ಟೂಮ್(ಸೂಡಾನ್), ಏ. ೧೮: ಸುಡಾನ್ನ ಮಿಲಿಟರಿ ಮತ್ತು ಮುಖ್ಯ ಪ್ಯಾರಾ ಮಿಲಿಟರಿ ಪಡೆಯ ನಡುವೆ ಉಂಟಾದ ಸಂಘರ್ಷದಲ್ಲಿ ಇದುವರೆಗೆ ಕನಿಷ್ಟ ೧೮೦ ಮಂದಿ ಮೃತಪಟ್ಟಿದ್ದು ೧,೮೦೦ಕ್ಕೂ ಹೆಚ್ಚು ಮಂದಿ ನಾಗರಿಕರು ಮತ್ತು ಹೋರಾಟಗಾರರು ಗಾಯಗೊಂಡಿದ್ದಾರೆ ಎಂದು ಸೂಡಾನ್ನ ವಿಶ್ವಸಂಸ್ಥೆ ರಾಯಭಾರಿ ವೊಲ್ಕರ್ ಪರ್ತ್ಸ್ ತಿಳಿಸಿದ್ದಾರೆ. ಸಂಘರ್ಷದಿAದಾಗಿ ರಾಜಧಾನಿ ಖಾರ್ಟೂಮ್ನಲ್ಲಿ ೫ ಮಿಲಿಯನ್ಗಿಂತಲೂ ಅಧಿಕ ಮಂದಿ ಮನೆಯಿಂದ ಹೊರಗೆ ಬರಲಾಗದೆ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದಾರೆ, ಇದು ಮುಸಲ್ಮಾನರ ಪವಿತ್ರ ತಿಂಗಳು ರಂಜಾನ್ ಆಗಿದ್ದರೂ ಕಳೆದ ಕೆಲವು ದಿನಗಳಿಂದ ಇಲ್ಲಿನ ನಿವಾಸಿಗಳಿಗೆ ವಿದ್ಯುತ್ ಮತ್ತು ನೀರಿನ ಪೂರೈಕೆ ಇಲ್ಲದೆ ದಿನನಿತ್ಯದ ಕೆಲಸಗಳಿಗೆ ಜನರಿಗೆ ಕಷ್ಟವಾಗುತ್ತಿದೆ. ಜನರಿಗೆ ತುರ್ತು ಆರೋಗ್ಯ ಸೌಲಭ್ಯ ಕೂಡ ದೊರಕುತ್ತಿಲ್ಲ. ಖಾರ್ಟೂಮ್ನ ಈಶಾನ್ಯ ಭಾಗದಲ್ಲಿ ಪ್ರಮುಖ ವೈದ್ಯಕೀಯ ಕೇಂದ್ರಗಳಲ್ಲಿ ವೈದ್ಯಕೀಯ ಸೇವೆ, ತುರ್ತು ಔಷಧಿಗಳು ಕೂಡ ನಾಗರಿಕರಿಗೆ ಸಿಗದ ಪರಿಸ್ಥಿತಿ ಉಂಟಾಗಿದೆ. ಈ ಭಾಗದಲ್ಲಿ ೧೨ಕ್ಕೂ ಹೆಚ್ಚು ಆಸ್ಪತ್ರೆಗಳು ಮುಚ್ಚಿವೆ. ನಿನ್ನೆ ಅಪರಾಹ್ನ ಸೂಡಾನ್ಗೆ ಐರೋಪ್ಯ ಒಕ್ಕೂಟದ ರಾಯಭಾರಿ ಏಡನ್ ಒಹರಾ ಮೇಲೆ ಹಲ್ಲೆ ನಡೆದಿದೆ. ಅವರ ಮೇಲೆ ಯಾರು ಹಲ್ಲೆ ನಡೆಸಿದ್ದಾರೆ ಎಂದು ತಕ್ಷಣಕ್ಕೆ ಗೊತ್ತಾಗಿಲ್ಲ, ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ಅದು ಹೀಗಿದೆ. ದೂರವಾಣಿ ಸಂಖ್ಯೆಗಳು: ೧೮೦೦ ೧೧ ೮೭೯೭ (ಟೋಲ್ ಫ್ರೀ) +೯೧-೧೧-೨೩೦೧೨೧೧೩; +೯೧-೧೧-೨೩೦೧೪೧೦೪; +೯೧-೧೧-೨೩೦೧೭೯೦೫; ಮೊಬೈಲ್: +೯೧ ೯೯೬೮೨ ೯೧೯೮೮ ಮತ್ತು ಇಮೇಲ್: siಣuಚಿಣioಟಿಡಿoom@meಚಿ.gov.iಟಿ
ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ
ಬೆಂಗಳೂರು, ಏ. ೧೮: ಮನಬಂದAತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ. ಹೊಸ ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಶಾಲೆಗೆ ಸೇರ್ಪಡೆಯಾಗುವವರು ಹಾಗೂ ಮತ್ತೊಂದು ಶಾಲೆಗೆ ಪ್ರವೇಶ ಪಡೆಯುವರ ಪ್ರಕ್ರಿಯೆಯೂ ಆರಂಭವಾಗಿದೆ. ಇದರ ಮಧ್ಯೆ ಖಾಸಗಿ ಶಾಲೆಗಳು ಮನಬಂದAತೆ ಶುಲ್ಕ ವಸೂಲಿ ಮಾಡುತ್ತಿವೆ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸೂಚಿಸಿದೆ. ಅಲ್ಲದೆ ಏಪ್ರಿಲ್ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಲಾಗಿದ್ದು, ಜೊತೆಗೆ ಮಗು ಹಿಂದೆ ಓದುತ್ತಿದ್ದ ಶಾಲೆ ತೊರೆದು ಬೇರೆ ಶಾಲೆಗೆ ಪ್ರವೇಶ ಪಡೆದ ಸಂದರ್ಭದಲ್ಲಿ ತಕ್ಷಣವೇ ವರ್ಗಾವಣೆ ಪತ್ರ ನೀಡಬೇಕು ಎಂದು ತಿಳಿಸಲಾಗಿದೆ. ಅಂತೆಯೇ ಮಗುವಿನ ಪ್ರವೇಶಕ್ಕೆ ಪೋಷಕರಿಗೆ ಪ್ರವೇಶ ಪರೀಕ್ಷೆ ನಡೆಸಬಾರದೆಂದು ಸೂಚಿಸಲಾಗಿದ್ದು, ನಿಯಮಗಳನ್ನು ಉಲ್ಲಂಘಿಸಿದ ಶಾಲೆಗಳಿಗೆ ಒಂದು ಲಕ್ಷ ರೂಪಾಯಿ ದಂಡ, ಇದು ಪುನರಾವರ್ತನೆ ಆದರೆ ದಿನಕ್ಕೆ ೧೦ ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.