ಕುಶಾಲನಗರ, ಏ. ೧೮: ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಪಿ. ಕೃಷ್ಣಮೂರ್ತಿ ಅವರ ವಾಹನದ ಮೇಲೆ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಪ್ರಕರಣವನ್ನು ಖಂಡಿಸಿ ಹಿಂದೂ ಜನ ಜಾಗೃತಿ ಸಮಿತಿಯ ಪ್ರಮುಖರು ಕುಶಾಲನಗರ ತಾಲೂಕು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಕೂಡಲೇ ಆರೋಪಿಗಳನ್ನು ಬಂಧಿಸುವAತೆ ಒತ್ತಾಯಿಸಿದ್ದಾರೆ.

ಕೃಷ್ಣಮೂರ್ತಿ ಅವರು ವಿಶ್ವಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರಿನಲ್ಲಿ ಹಿಂತಿರುಗುವಾಗ ಚೆಟ್ಟಳ್ಳಿಯಿಂದ ಮಡಿಕೇರಿಗೆ ಪ್ರಯಾಣಿಸುತ್ತಿದ್ದ ವೇಳೆ ಅವರ ವಾಹನದ ಮೇಲೆ ದಾಳಿ ನಡೆದಿದೆ. ಈ ಹೇಡಿತನದ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ಖಂಡಿಸುತ್ತದೆ ಮತ್ತು ತಕ್ಷಣ ಆರೋಪಿಗಳ ಬಂಧನ ಮಾಡುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಿದೆ.

ಘಟನೆ ಹಿಂದೆ ಅರ್ಬನ್ ನಕ್ಸಲರ ಕೈವಾಡ ಇರುವ ಸಾಧ್ಯತೆ ಇದೆ. ಕೃಷ್ಣಮೂರ್ತಿ ಅವರಿಗೆ ಸಶಸ್ತç ಪೊಲೀಸ್ ರಕ್ಷಣೆಯನ್ನು ನೀಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಪ್ರಮುಖರಾದ ಅಮೃತರಾಜ್, ಕೆ. ಶಿವರಾಂ, ಸೋಮಶೇಖರ್ ಮತ್ತಿತರರು ಇದ್ದರು.