ಮಡಿಕೇರಿ, ಏ. ೧೮: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮಡಿಕೇರಿ ಕ್ಷೇತ್ರದಿಂದ ಇಂದು ಮೂವರು ನಾಮಪತ್ರ ಸಲ್ಲಿಸಿದರು.
ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ದಿವಿಲ್ ಕುಮಾರ್, ಐಎಂಪಿ ಬೆಂಬಲಿತೆಯಾಗಿ ರಶೀದ ಬೇಗಂ, ಪಕ್ಷೇತರ ಅಭ್ಯರ್ಥಿಯಾಗಿ ಖಲೀಲ್ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ಡಾ. ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.