ಮಡಿಕೇರಿ, ಏ. ೧೯: ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಅಲಿ, ಸರ್ವೋದಯ ಪಕ್ಷದ ಅಭ್ಯರ್ಥಿ ಕೊಡಗು ಜಿಲ್ಲಾ ರೈತ ಸಂಘ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಆಮ್ ಆದ್ಮಿ ಪಕ್ಷದಿಂದ ರವೀಂದ್ರ ಹಾಗೂ ಮಡಿಕೇರಿಯಲ್ಲಿ ನಾಲ್ವರು ಅಭ್ಯರ್ಥಿಗಳು ಸೇರಿದಂತೆ ಒಟ್ಟು ೭ ಮಂದಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಮನ್ಸೂರ್ ಅಲಿ : ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಅಲಿ ಪಟ್ಟಣದ ಗಡಿಯಾರ ಕಂಬದ ಬಳಿಯಿಂದ ಮೆರವಣಿಗೆಯ ಮೂಲಕ ನಡೆದುಕೊಂಡು ಹೋಗಿ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಮನ್ಸೂರ್ ಅಲಿ ನಾನೊಬ್ಬ ಜೆಡಿಎಸ್ ಸಾಮಾನ್ಯ ಕಾರ್ಯಕರ್ತ, ನನ್ನ ಬಳಿ ಹಣ ಬಲವಿಲ್ಲ, ಜನಬಲವಿದೆ. ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿದ್ದೇನೆ. ಇದೀಗ ನನ್ನನ್ನು ಗುರುತಿಸಿ ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದೆ. ಸಾಮಾನ್ಯ ಕಾರ್ಯಕರ್ತರಿಗೆ ಜೆಡಿಎಸ್ ಪಕ್ಷದಲ್ಲಿ ಮಾತ್ರ ಟಿಕೆಟ್ ನೀಡುವುದು. ಕಾಂಗ್ರೆಸ್ ಹಾಗೂ ಬಿಜೆಪಿ ಹಣ ಬಲವಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತದೆ. ಅಲ್ಪಸಂಖ್ಯಾತರಿಗೆ ಇದುವರೆಗೆ ಕ್ಷೇತ್ರದಲ್ಲಿ ಯಾವ ಪಕ್ಷವೂ ಟಿಕೆಟ್ ನೀಡಿಲ್ಲ. ಜೆಡಿಎಸ್ ಪಕ್ಷ ಅಲ್ಪಸಂಖ್ಯಾತ ಸಾಮಾನ್ಯ ಕಾರ್ಯಕರ್ತನಾದ ನನಗೆ ಟಿಕೆಟ್ ನೀಡಿದೆ. ಜೆಡಿಎಸ್ ಜಾತ್ಯತೀತ ನಿಲುವಿನ ಪಕ್ಷ.
(ಮೊದಲ ಪುಟದಿಂದ) ರಾಷ್ಟಿçÃಯ ಪಕ್ಷಗಳು ಅಲ್ಪಸಂಖ್ಯಾತರನ್ನು ಕೇವಲ ವೋಟ್ ಬ್ಯಾಂಕ್‌ಗಾಗಿ ಬಳಸಿಕೊಂಡಿವೆ. ಈ ಬಾರಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆಯ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಅಲಿ ಖಾನ್, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಮಂಜುನಾಥ್, ಜೆಡಿಎಸ್‌ನ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷ ಪಾಣತಲೆ ವಿಶ್ವನಾಥ್ ಉಪಸ್ಥಿತರಿದ್ದರು.
ಮೆರವಣಿಗೆಯಲ್ಲಿ ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ, ವೀರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ ಮಂಜುನಾಥ್, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ವಿಶ್ವ, ಪ್ರಧಾನ ಕಾರ್ಯದರ್ಶಿ ಜಾಸೀರ್ ಮೂರ್ನಾಡು, ಜಿಲ್ಲಾ ಜೆಡಿಎಸ್ ಖಜಾಂಜಿ ಡೆನ್ನಿ ಬರೋಸ್, ಉಪಾಧ್ಯಕ್ಷ ಯೂಸುಫ್ ಕೊಂಡAಗೇರಿ, ಕಾರ್ಯದರ್ಶಿ ಸುನಿಲ್ ಮುಖಂಡರಾದ ಪಂದ್ಯAಡ ರವಿ ಮಾದಪ್ಪ, ಕುಟ್ಟ ವಿಭಾಗದ ನಾಯಕರಾದ ರನ್ನಿ, ಬಾಳೆಕುಟ್ಟಿರ ದೀನಿ, ಎ. ಸನ್ನು ಕುಶಾಲಪ್ಪ, ಪಾಣತ್ತಲೆ ಸತ್ಯ, ಹರ್ಷ ಟಿ.ಆರ್. ಸೂರ್ಯ, ಅಮ್ಮತ್ತಿ ಜಯಮ್ಮ, ಮಜೀದ್ ಚೋಕಂಡಹಳ್ಳಿ, ಯೋಗೇಶ್ ನಾಯ್ಡು, ಜುಬೈದ ನಬುವತ್, ಗ್ರಾಮ ಪಂಚಾಯಿತಿ ಸದಸ್ಯೆ ಭೈರ ಬೇಬಿ, ಸೈಪುದ್ದೀನ್ ಚಾಮಿಯಾಲ ಹಾಗೂ ನೂರಾರು ಬೆಂಬಲಿಗರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮನು ಸೋಮಯ್ಯ : ಸರ್ವೋದಯ ಪಕ್ಷದ ಅಭ್ಯರ್ಥಿ ಕೊಡಗು ಜಿಲ್ಲಾ ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ವೀರಾಜಪೇಟೆ ಗಡಿಯಾರ ಕಂಬದ ಬಳಿಯಿಂದ ಮೆರವಣಿಗೆ ಮೂಲಕ ಸಾಗಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಶಬನಾ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪೂಣಚ್ಚ, ರಾಜ್ಯ ಸಂಘಟನಾ ಕಾರ್ಯದರ್ಶಿ ದರ್ಶನ್ ಪುಟ್ಟಣ್ಣಯ್ಯ, ಕೊಡಗು ಜಿಲ್ಲಾ ಸಂಚಾಲಕ ಸುಭಾಶ್ ಪುಚ್ಚಿಮಾಡ, ವಕೀಲರಾದ ಪೂವಣ್ಣ ಜಿಲ್ಲಾ ಖಜಾಂಚಿ ಇಟ್ಟೀರ ಬಬಿತ ಇದ್ದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅಭ್ಯರ್ಥಿ ಕಾಡ್ಯಮಾಡ ಮನು ಸೋಮಯ್ಯ, ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಬರುವ ವಿಶ್ವಾಸ ವ್ಯಕ್ತಪಡಿಸಿ ನಾಳೆಯಿಂದಲೇ ಮತಯಾಚನೆ ತಯಾರಿ ನಡೆಸಲಾಗಿದೆ. ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಬೇಕು ಎನ್ನುವ ಛಲ ಇದೆ. ರೈತ ಸಂಘದ ಮೂಲಕ ಹಲವಾರು ಜನರ ಕಷ್ಟನಷ್ಟಗಳಿಗೆ ಸ್ಪಂದಿಸಿದ್ದೇನೆ. ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ ಎಂದು ಹೇಳಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ಕಾರ್ಯಕರ್ತರು, ನೂರಾರು ಬೆಂಬಲಿಗರು ಪಾಲ್ಗೊಂಡಿದ್ದರು.
ರವೀAದ್ರ : ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿ ಪೊನ್ನಂಪೇಟೆಯ ಪೊನ್ನಪ್ಪಸಂತೆಯ ಸಿ.ಎಸ್. ರವೀಂದ್ರ ಬುಧವಾರ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಶಬನಾ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು.
೨೦೧೧ರಲ್ಲಿ ದೇಶದಲ್ಲಿ ಅಣ್ಣಾ ಹಜಾರೆ ನಡೆಸಿದ ಜನಾಂದೋಲನ ದಿಂದ ಸ್ಫೂರ್ತಿಗೊಂಡು ನಂತರ ಸ್ಥಾಪನೆಯಾದ ಆಮ್ ಆದ್ಮಿ ಪಕ್ಷದಲ್ಲಿ ಸೇರ್ಪಡೆಗೊಂಡ ರವೀಂದ್ರ ಅಂದಿನಿAದ ಇಂದಿನವರೆಗೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಜನರ ಸಮಸ್ಯೆಗಳಿಗೆ ಸುಲಭವಾಗಿ ಸ್ಪಂದಿಸುವ ಇಚ್ಛಾಶಕ್ತಿಯನ್ನು ಹೊಂದಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದರು. ಈ ಸಂದರ್ಭ ಪ್ರಥ್ವಿ ಹಾಗೂ ಅಪ್ಪಯ್ಯ ಇದ್ದರು.
ಮಡಿಕೇರಿ ಕ್ಷೇತ್ರ-ನಾಲ್ವರಿಂದ ನಾಮಪತ್ರ
ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ಇಂದು ನಾಲ್ವರು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಯಿಂದ ಬಿ.ಕೆ. ಶ್ರೀನವಾಸ ರೈ, ಪಕ್ಷೇತರ ಅಭ್ಯರ್ಥಿಯಾಗಿ ಅಶ್ರಫ್, ಆರ್‌ಪಿಐನಿಂದ ಕೆ.ಬಿ. ರಾಜು, ಪಕ್ಷೇತರ ಅಭ್ಯರ್ಥಿಯಾಗಿ ಪಿ.ಕೆ. ದರ್ಶನ್ ಶೌರಿ ಚುನಾವಣಾಧಿಕಾರಿ ಯತೀಶ್ ಉಲ್ಲಾಳ್ ಅವರಿಗೆ ನಾಪತ್ರ ಸಲ್ಲಿಸಿದರು.