ಮಡಿಕೇರಿ, ಏ. ೧೮: ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಂತ್ವನ ಕೌಟುಂಬಿಕ ಸಲಹಾ ಕೇಂದ್ರದಲ್ಲಿ ಒಟ್ಟು ೪೭೮೫ ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೦೨ ರಲ್ಲಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಜಿಲ್ಲೆಯಾದ್ಯಂತ ಸಮಾಜದ ನೊಂದ ಮಹಿಳೆಯರ ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣ ಸ್ಪಂದಿಸುವ ಕೆಲಸ ಮಾಡುತ್ತಿದೆ.
ಸಾಂತ್ವನ ಕೇಂದ್ರದಲ್ಲಿ ಇದುವರೆಗೂ ೪೮೦೪ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೪೭೮೫ ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ಯಶಸ್ವಿಯಾಗಿದೆ. ೨೦೨೨-೨೩ನೇ ಸಾಲಿನಲ್ಲಿ ಒಟ್ಟು ೩೨೨ ಪ್ರಕರಣ ದಾಖಲಾಗಿ ೩೧೯ ಪ್ರಕರಣಗಳು ಬಗೆಹರಿದಿವೆ. ಹಿಂದಿನ ಸಾಲಿನ ಉಳಿದ ಪ್ರಕರಣ ಸೇರಿ ೧೯ ಪ್ರಕರಣಗಳು ಇತ್ಯರ್ಥದ ಹಂತದಲ್ಲಿವೆ ಎಂದು ಸಂಸ್ಥೆ ಅಧ್ಯಕ್ಷ ಕೆ.ಎಸ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ನಮಿತ ಆರ್. ರೈ ಮಾಹಿತಿ ನೀಡಿದ್ದಾರೆ.
ನೊಂದ ಮಹಿಳೆಯರು ಸಹಾಯವಾಣಿಯ ಸಹಕಾರ ಪಡೆದುಕೊಳ್ಳುವಂತೆ ಕೋರಿರುವ ಅವರು, ಹೆಚ್ಚಿನ ಮಾಹಿತಿಗೆ ೯೮೮೦೯೮೫೯೩೯ ಸಂಖ್ಯೆಯನ್ನು ಸಂಪರ್ಕಿಸುವAತೆ ತಿಳಿಸಿದ್ದಾರೆ.