ಮಡಿಕೇರಿ, ಏ. ೧೯: ವಿಧಾನಸಭಾ ಚುನಾವಣಾ ಹಿನ್ನೆಲೆ ಭಾರತ ಚುನಾವಣಾ ಆಯೋಗವು ಕೊಡಗು ಜಿಲ್ಲೆಯ ೨೦೮-ಮಡಿಕೇರಿ ವಿಧಾನಸಭಾ ಕ್ಷೇತ್ರ ಮತ್ತು ೨೦೯-ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ವಿಕ್ರಮ್ ಸಿಂಗ್ ಮಲಿಕ್ ಭಾ.ಆ.ಸೇ. ಅವರನ್ನು ನಿಯೋಜಿಸಿದ್ದು, ತಾ. ೧೮ ರಂದು ಕೊಡಗು ಜಿಲ್ಲೆಯಲ್ಲಿ ವರದಿ ಮಾಡಿಕೊಂಡಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರನ್ನು ಬುಧವಾರ ನಗರದ ಜಿಲ್ಲಾಧಿಕಾರಿಯವರ

ಸಾಮಾನ್ಯ ವೀಕ್ಷಕರ ಭೇಟಿ : ಪರಿಶೀಲನೆ

(ಮೊದಲ ಪುಟದಿಂದ) ಕಚೇರಿಯಲ್ಲಿ ಭೇಟಿ ಮಾಡಿ ಚುನಾವಣೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು.

ವಿಧಾನಸಭಾ ಚುನಾವಣಾ ಸಂಬAಧ ಹೆಚ್ಚಿನ ಮಾಹಿತಿಗೆ ಜಿಲ್ಲಾಡಳಿತ ಭವನದ ಮೊದಲ ಮಹಡಿಯ ಕೊಠಡಿ ಸಂಖ್ಯೆ ೩ ರಲ್ಲಿ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧೨ ಗಂಟೆ ವರೆಗೆ ನೇರವಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ ೬೩೬೦೦೪೧೧೦೧ ಅಥವಾ ಸಾಮಾನ್ಯ ವೀಕ್ಷಕರ ಸಂಪರ್ಕ ಅಧಿಕಾರಿ ಡಾ.ಜೆ.ಆರ್.ಬಾಲಸುಬ್ರಮಣ್ಯಂ ೯೬೩೨೯೫೩೦೧೯ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.