ಮಡಿಕೇರಿ, ಏ. ೧೯: ಇಲ್ಲಿಗೆ ಸಮೀಪದ ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಮ್ಮೆತ್ತಾಳು ಗ್ರಾಮದ ಗ್ರಾಮ ದೇವತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಬೆಳಿಗ್ಗೆಯಿಂದಲೇ ವಿವಿಧ ಪೂಜಾದಿ ಕಾರ್ಯಗಳೊಂದಿಗೆ ಮಧ್ಯಾಹ್ನ ಮಹಾಮಂಗಳಾರತಿ ನೆರವೇರಿತು. ಇದೇ ಸಂದರ್ಭದಲ್ಲಿ ಸನ್ನಿಧಿಯಲ್ಲಿ ಪ್ರತಿಷ್ಠಾಪನೆಯಾಗಿರುವ ಗುಳಿಗ ಹಾಗೂ ನಾಗದೇವನಿಗೂ ವಿಶೇಷ ಪೂಜೆ ನೆರವೇರಿಸಲಾಯಿತು.
ದೇವಾಲಯದ ಪೂಜಾರಿ ಪಿ.ಪಿ. ಗಂಗಾಧರ ಪೂಜಾ ಕಾರ್ಯ ನೆರವೇರಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ದೇವಪ್ಪ, ಕಾರ್ಯದರ್ಶಿ ಗಿರೀಶ್, ಪದಾಧಿಕಾರಿಗಳು, ಸಮಿತಿಯವರು, ಗ್ರಾಮಸ್ಥರು ನೆರೆಕರೆಯವರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ ಮಾಡಲಾಯಿತು.