ಮಡಿಕೇರಿ, ಏ. ೨೧: ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಲ್ಲಿ ಒಬ್ಬರಾಗಿದ್ದ ಕದ್ದಣಿಯಂಡ ಹರೀಶ್ ಬೋಪಣ್ಣ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿರುವ ಹರೀಶ್ ಬೋಪಣ್ಣ, ಕಳೆದ ೨೫ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದೆ. ವೀರಾಜಪೇಟೆ, ಪೊನ್ನಂಪೇಟೆ ತಾಲೂಕಿನಲ್ಲಿ ಅನೇಕ ಜನಸೇವೆ, ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಪೂರಕವಾಗಿ ಶ್ರಮಿಸಿದ್ದೇನೆ. ಕೆಲವು ಅನಿವಾರ್ಯ ಕಾರಣದಿಂದ ಬೆಂಬಲಿಗರೊAದಿಗೆ ಚರ್ಚಿಸಿ ರಾಜೀನಾಮೆ ನಿರ್ಧಾರ ಕೈಗೊಂಡಿದ್ದೇನೆ ಎಂದು ಪತ್ರದಲ್ಲಿ ಹರೀಶ್ ಉಲ್ಲೇಖಿಸಿದ್ದಾರೆ.

ಎಂ.ಆರ್. ಸೀತಾರಾಮ್ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಹರೀಶ್, ೨೦೧೮ರಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಾರಿಯೂ ಕ್ಷೇತ್ರದ ಆಕಾಂಕ್ಷಿಗಳ ಸಾಲಿನಲ್ಲಿ ಹರೀಶ್ ಹೆಸರಿತ್ತು. ಆದರೆ, ಟಿಕೆಟ್ ಕೋರಿ ಪಕ್ಷಕ್ಕೆ ಅರ್ಜಿ ಸಲ್ಲಿಸಿರಲಿಲ್ಲ. ಆಂತರಿಕ ಭಿನ್ನಮತದಿಂದ ಪಕ್ಷ ಚಟುವಟಿಕೆಯಿಂದ ದೂರವಾಗಿದ್ದ ಹರೀಶ್ ಅವರನ್ನು ಮಾಜಿ ವಿಧಾನ ಪರಿಷತ್ತು ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಸಂಧಾನ ಸಭೆ ನಡೆಸುವ ಮೂಲಕ ಪಕ್ಷದ ಗೆಲುವಿಗೆ ಶ್ರಮಿಸುವಂತೆಯೂ ಮನವೊಲಿಸಿದ್ದರು.