ಮಡಿಕೇರಿ, ಏ. ೨೦: ಮಡಿಕೇರಿ ಗೌಳಿಬೀದಿಯಲ್ಲಿರುವ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ೧೬ನೇ ವರ್ಷದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ತಾ. ೨೧ (ಇಂದು) ಹಾಗೂ ೨೨ ರಂದು ನೆರವೇರಲಿದೆ.

ತಾ. ೨೧ ರಂದು ಸಂಜೆ ೬ ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ. ತಾ. ೨೨ ರಂದು ಬೆಳಿಗ್ಗೆ ೭ ಗಂಟೆಗೆ ಮಹಾ ಗಣಪತಿ ಹೋಮ, ಮಹಾಮೃತ್ಯುಂಜಯ ಹೋಮ, ಕಲಶ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾಪೂಜೆ ನೆರವೇರಲಿದೆ.

ತಾ. ೨೨ ರಂದು ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರುಗಲಿದೆ. ಕೇರಳದ ಪಯ್ಯನೂರ್‌ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಉತ್ಸವ ನಡೆಯಲಿದೆ.