ಸುAಟಿಕೊಪ್ಪ, ಏ. ೨೦: ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ ೪೫ನೇ ವಾರ್ಷಿಕ ಮಹೋತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನ ಗೊಂಡಿತು. ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳು ಪ್ರಾರಂಭ ಗೊಂಡಿದ್ದವು. ಇದರ ಅಂಗವಾಗಿ ದೇವಾಲಯವನ್ನು ತಳಿರು ತೋರಣ ವಿದ್ಯುತ್ ದೀಪಾಂಲಕಾರ ಗಳಿಂದ ಸಿಂಗರಿಸಲಾಗಿತ್ತು. ಸುತ್ತಮುತ್ತಲ ಗ್ರಾಮಗಳ ನೂರಾರು ಮಂದಿ ೩ ದಿನ ಕಾಲ ನಡೆದ ವಾರ್ಷಿಕ ಮಹೋತ್ಸವ ದಲ್ಲಿ ಭಾಗಿಯಾಗಿದ್ದರು. ಸಂಜೆ ದೀಪಾರಾಧನೆ, ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿAದ ಚಂಡೆ ಮೇಳ ಜರುಗಿತು.

ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆಯೊಂದಿಗೆ ಭಕ್ತರ ಹರಕೆ ಮತ್ತು ಬೇಡಿಕೆಗಳು ನಡೆದವು. ವಿವಿಧ ದೈವಗಳ ಕೋಲ ನಡೆದ ಸಂದರ್ಭ ಆಕರ್ಷಕ ಪಟಾಕಿ ಮತ್ತು ಸಿಡಿಮದ್ದಿನ ಕಾರ್ಯಕ್ರಮ ಬಾನಂಗಳ ದಲ್ಲಿ ಚೆಲುವಿನ ಚಿತ್ತಾರವನ್ನು ಬಿಡಿಸುವ ಮೂಲಕ ಭಕ್ತರು ವಯಸ್ಕರು ಎನ್ನದೆ ನೇರೆದಿದ್ದ ಜನಸ್ತೋಮವನ್ನು ಮನಸೂರೆಗೊಂಡಿತು. ಅಜ್ಜಪ್ಪ ಕೋಲ, ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲದೊಂದಿಗೆ ರಾತ್ರಿ ಶ್ರೀದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿತು.