ಮಡಿಕೇರಿ, ಏ. ೨೨: ನಗರದ ಗೌಳಿಬೀದಿಯಲ್ಲಿರುವ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ೧೬ನೇ ವರ್ಷದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.

ತಾ. ೨೧ ರಂದು ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆದು ತಾ. ೨೨ ರಂದು ಮಹಾಗಣಪತಿ ಹೋಮ, ಮಹಾಮೃತ್ಯುಂಜಯ ಹೋಮ, ಕಲಶ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾಪೂಜೆ ಕೇರಳದ ಪಯ್ಯನೂರ್‌ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ದೇವಾಲಯ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.