ಸೋಮವಾರಪೇಟೆ, ಏ. ೨೨: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂತರ್ ಗೌಡ ಅವರು ಸೋಮವಾರಪೇಟೆ ವ್ಯಾಪ್ತಿಯ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.

ಕಾAಗ್ರೆಸ್‌ನ ಮುಖಂಡರೊAದಿಗೆ ಸ್ಥಳೀಯ ಕಾರ್ಯಕರ್ತರು ಹಾಗೂ ಮತದಾರರನ್ನು ಭೇಟಿ ಮಾಡಿ, ಬಿಜೆಪಿ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವAತೆ ಮನವಿ ಮಾಡಿದರು.

ತಾಲೂಕಿನ ಆಲೂರು ಸಿದ್ದಾಪುರ, ಮಾಲಂಬಿ, ಶಾಂತಳ್ಳಿ, ಬೆಟ್ಟದಳ್ಳಿ ಸೇರಿದಂತೆ ಇತರ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಲಾಯಿತು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ಯುವ ಕಾಂಗ್ರೆಸ್‌ನ ಮಿಥುನ್ ಹಾನಗಲ್ಲು, ಮುಖಂಡರಾದ ಜೆ.ಎಲ್. ಜನಾರ್ಧನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.