ಮಡಿಕೇರಿ, ಏ. ೨೨: ಬೆಸೂರು ಗ್ರಾ.ಪಂ. ವ್ಯಾಪ್ತಿಯ ದೊಡ್ಡಭಂಡಾರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಇವರಲ್ಲಿ ಗ್ರಾಮಸ್ಥರು ಕೋರಿಕೊಂಡ ಮೇರೆಗೆ ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಸಂಬAಧಿಸಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಮುಂದಾಗಿದ್ದು, ಬೋರ್‌ವೆಲ್‌ನಲ್ಲಿ ಕೆಟ್ಟುಹೋಗಿದ್ದ ಮೋಟಾರನ್ನು ಸರಿಪಡಿಸಿ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಸುರೇಶ್ ಕುಮಾರ್ ತಿಳಿಸಿದ್ದಾರೆ.