ಮಡಿಕೇರಿ, ಏ. ೨೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು.
ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಅವರು ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಿದರು. ಬಸವೇಶ್ವರರು ಎಲ್ಲಾ ಸಮಾಜದವರನ್ನೂ ಅನುಭವ ಮಂಟಪದ ಪ್ರಜಾಪ್ರಭುತ್ವದ ವೇದಿಕೆಗೆ ತಂದು ಅಭಿವ್ಯಕ್ತಿ ಸ್ವಾತಂತ್ರ್ಯದ ಚರ್ಚಾ ವೇದಿಕೆಯಾಗಿ ಬೆಳೆಸಿದರು ಎಂದು ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ ತಿಳಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ. ರಂಗಧಾಮಯ್ಯ ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಂಗರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಇತರರು ಇದ್ದರು.