ಸೋಮವಾರಪೇಟೆ, ಏ. ೨೩: ಭಾರತೀಯ ಜನತಾ ಪಾರ್ಟಿಯಿಂದ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಪ್ಪಚ್ಚು ರಂಜನ್ ಅವರು ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿದರು. ಬಿಜೆಪಿಯ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರೊಂದಿಗೆ ತಾಲೂಕಿನ ಶನಿವಾರಸಂತೆ ಪಟ್ಟಣದ ಅಂಗಡಿ ಮುಂಗಟ್ಟುಗಳು, ಮನೆ ಮನೆಗೆ ತೆರಳಿದ ರಂಜನ್, ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು. ರಾಜ್ಯ ಬಿಜೆಪಿ ಸರ್ಕಾರ ಮಡಿಕೇರಿ ಕ್ಷೇತ್ರದ ಅಭಿವೃದ್ಧಿಗೆ ರೂ. ೨ ಸಾವಿರ ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಿದೆ. ಮುಂದೆಯೂ ಅಭಿವೃದ್ಧಿ ಮತ್ತು ಸಾಮಾಜಿಕ ಭದ್ರತೆಗಾಗಿ ಬಿಜೆಪಿಗೆ ಮತ ನೀಡುವಂತೆ ಕೋರಿದರು.

ಈ ಸಂದರ್ಭ ಪಕ್ಷದ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ಮುಖಂಡರಾದ ಎಸ್.ಎನ್. ರಘು, ಹೆಚ್.ಕೆ. ಮಾದಪ್ಪ, ಅಭಿಮನ್ಯುಕುಮಾರ್, ವಿ.ಕೆ. ಲೋಕೇಶ್, ವಿ.ಎಂ. ವಿಜಯ, ಶ್ರೀನಿಧಿ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.