ಸೋಮವಾರಪೇಟೆ, ಏ. ೨೨: ಇಲ್ಲಿನ ಮಹದೇಶ್ವರ ಬಡಾವಣೆಯಲ್ಲಿರುವ ಶ್ರೀ ಮುನೇಶ್ವರ ಸ್ವಾಮಿ ಹಾಗೂ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ೬ನೇ ವರ್ಷದ ವಾರ್ಷಿಕ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.

ಅರ್ಚಕ ಜಗದೀಶ್ ಉಡುಪ ನೇತೃತ್ವದಲ್ಲಿ ಬೆಳಗ್ಗಿನಿಂದ ದೇವಾಲಯದಲ್ಲಿ ಗಣಪತಿ ಹೋಮ, ದುರ್ಗಾ ಹೋಮ, ಕಲಶ ಪ್ರತಿಷ್ಠಾಪನೆ, ಕಲಶಾಭಿಷೇಕ, ಅಲಂಕಾರ, ಮಹಾಪೂಜೆ ಜರುಗಿತು.

ಈ ಸಂದರ್ಭ ಮಹದೇಶ್ವರ ಬಡಾವಣೆಯ ಭಕ್ತ ವೃಂದ ಸಮಿತಿ ಮತ್ತು ನೂರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.