ವೀರಾಜಪೇಟೆ, ಏ. ೨೨: ಅಂಗಡಿ ವರ್ತಕನ ಮೇಲೆ ರಿವಾಲ್ವಾರ್‌ನಿಂದ ಮೂರು ಸುತ್ತು ಗುಂಡು ಹಾರಿಸಿದ ಘಟನೆ ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ.
ಎನ್. ರಂಜನ್ ಚಿಣ್ಣಪ್ಪ ಎಂಬಾತ ಗುಂಡು ಹಾರಿಸಿದ ವ್ಯಕ್ತಿ. ಸಿದ್ದಾಪುರ ರಸ್ತೆಯ ವರ್ತಕ ಕೆ. ಬೋಪಣ್ಣ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದು, ಕೂದಲೆಳೆಯ ಅಂತರದಿAದ ಪಾರಾಗಿದ್ದಾರೆ.
ರಂಜನ್‌ಗೆ ಸೇರಿದ ಮನೆಯ ಮುಂಭಾಗದ ಅಂಗಡಿ ಮಳಿಗೆಯಲ್ಲಿ ಸುಮಾರು ೮ ವರ್ಷಗಳಿಂದ ಬೋಪಣ್ಣ ಮತ್ತು ಆತನ ಪಾಲುದಾರರು ಅಡಿಕೆ ಮಂಡಿಯನ್ನು ನಡೆಸುತ್ತಿದ್ದರು. ಅಂಗಡಿ ಮಳಿಗೆಯನ್ನು ಖಾಲಿ ಮಾಡುವಂತೆ ಈ ಹಿಂದೆ ರಂಜನ್ ಸೂಚಿಸಿದ್ದರು. ಇದಕ್ಕೆ ಬೋಪಣ್ಣ ಕಾಲಾವಕಾಶವನ್ನು ಕೇಳಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಅಂಗಡಿ ಖಾಲಿ ಮಾಡುವುದಾಗಿ ಹೇಳಿ ೨೫ ಸಾವಿರ ರೂ. ಮುಂಗಡ ಹಣ ನೀಡಿದ್ದರಲ್ಲಿ ಬಾಡಿಗೆ ಹಣ ಕಳೆದು ಉಳಿದ ಹಣ ಕೊಡುವಂತೆ ರಂಜನ್ ಬಳಿ ಹೇಳಿದಾಗ ಮಾತಿಗೆ ಮಾತು ಬೆಳೆದು ಪುನಃ ರಂಜನ್ ಮತ್ತು ಬೋಪಣ್ಣ ಅವರ ಮಧ್ಯೆ ಮಾತಿಗೆ ಮಾತು ಬೆಳೆದು ರಂಜನ್ ಏಕಾಏಕಿ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾರೆ. ಬೋಪಣ್ಣ ಅವರು ತಪ್ಪಿಸಿಕೊಂಡಿದ್ದರಿAದ ಅಂಗಡಿಯ ಶಟರ್‌ಗೆ ಗುಂಡು ತಾಗಿದೆ. ಈ ಸಂದರ್ಭ ಬೋಪಣ್ಣ ಅವರ ಕೈಗೆ ಸಣ್ಣ ಗಾಯವಾಗಿದೆ.
ಮಾತಿಗೆ ಮಾತು ಬೆಳೆದ ಸಂದರ್ಭ ಬಳಿಕ ರಂಜನ್ ಮೇಲೆ ಕೂಡ ಹಲ್ಲೆ ನಡೆದಿದ್ದು, ಆತನಿಗೆ ಅಮ್ಮತ್ತಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವೀರಾಜಪೇಟೆ ಡಿವೈಎಸ್‌ಪಿ ಮೋಹನ್ ಕುಮಾರ್, ವೃತ್ತ ನಿರೀಕ್ಷಕ ಸಿ.ಎ. ಶಿವರುದ್ರ, ಹಾಗೂ ವೀರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ರವಿಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೃತ್ಯ ಎಸಗಿದ ರಂಜನ್ ಚಿಣ್ಣಪ್ಪ ಅವರನ್ನು ಬಂಧಿಸಲಾಗಿದೆ.
(ಮೊದಲ ಪುಟದಿಂದ) ಘಟನೆಗೆ ಸಂಬAಧಿಸಿದAತೆ ಕೆ. ಬೋಪಣ್ಣ ಅವರು ನೀಡಿದ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲವೊಂದರ ಪ್ರಕಾರ ಆರೋಪಿಯು ಈಗ ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಕೇಂದ್ರದ ಸಚಿವರಾಗಿದ್ದ ಕೇರಳದ ವ್ಯಕ್ತಿಯೊಬ್ಬರ ಪುತ್ರಿಯನ್ನು ವಿವಾಹವಾಗಿರುವ ಇವರಿಗೆ ಮೂವರು ಮಕ್ಕಳಿದ್ದಾರೆ. ಪ್ರಕರಣವನ್ನು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ತೀವ್ರವಾಗಿ ಖಂಡಿಸಿದೆ. ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ಖಂಡನೆ: ಘಟನೆಯನ್ನು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟಿçÃಸ್ ತೀವ್ರವಾಗಿ ಖಂಡಿಸಿದೆ. ಆರೋಪಿಯನ್ನು ಸೂಕ್ತ ತನಿಖೆಗೆ ಒಳಪಡಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ.