ಮುಳ್ಳೂರು, ಏ. ೨೩: ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ ಮತ್ತು ಕಲಾ ಹಾಗೂ ವಾಣಿಜ್ಯ ಸಂಘದ ವತಿಯಿಂದ ಶುಕ್ರವಾರ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.
ಮತದಾನ ಜಾಗೃತಿ ಅಭಿಯಾನ ಜಾಥಾಕ್ಕೆ ಚಾಲನೆ ನೀಡಿ ಮಾತ ನಾಡಿದ ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್, ಚುನಾವಣೆ ಗಳಲ್ಲಿ ಮತದಾನದ ಶೇಖಡವಾರು ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತದಾನದ ಹಕ್ಕು ಪಡೆದಿರುವ ಪ್ರತಿಯೊಬ್ಬ ಮತದಾರನು ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು, ರಾಷ್ಟçದ ಅಭಿವೃದ್ಧಿ ಯಲ್ಲಿ ಮತದಾರನ ಜವಾಬ್ದಾರಿ ಮುಖ್ಯವಾಗಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತದಾನದ ಮಹತ್ವದ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದರು.
ದೊಡ್ಡಕುAದಾ ಗ್ರಾಮದವರೆಗೆ ಮತದಾನ ಜಾಗೃತಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಮತದಾನ ಮಾಡುವಂತೆ ಜಾಗೃತಿಗೊಳಿಸಿದರು. ಜೊತೆಯಲ್ಲಿ ಮತದಾನ ಜಾಗೃತಿ ಕುರಿತಾದ ಕರಪತ್ರಗಳನ್ನು ಗ್ರಾಮದ ಮನೆ ಮನೆಗಳಿಗೆ ತೆರಳಿ ಹಂಚಿದರು.
ವಿದ್ಯಾಸAಸ್ಥೆ ಕಾರ್ಯದರ್ಶಿ ಕೆ.ಎಸ್. ಪರಮೇಶ್, ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಯೋಗೇಂದ್ರ, ಕಾಲೇಜು ಉಪನ್ಯಾಸಕರು ಜಾಥಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.