ವೀರಾಜಪೇಟೆ, ಏ. ೨೩: ವೀರಾಜಪೇಟೆಯ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ ಪರಿಸರ ಪ್ರಜ್ಞೆ ಹಾಗೂ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಎನ್ಎಸ್ಎಸ್ ಘಟಕದ ವತಿಯಿಂದ ತಡಿಯಂಡ ಮೋಳ್ ಬೆಟ್ಟಕ್ಕೆ ಚಾರಣ ಮಾಡಲಾಯಿತು.
ವಿದ್ಯಾರ್ಥಿಗಳು ಅತಿ ಉತ್ಸಾಹದಿಂದ ಕಾರ್ಯಕ್ರಮ ಹಾಗೂ ಅಭಿಯಾನದಲ್ಲಿ ಪಾಲ್ಗೊಂಡರು. ಚಾರಣ ಕಾರ್ಯಕ್ರಮಕ್ಕೆ ಭಾಗಮಂಡಲ ವಲಯ ಅರಣ್ಯ ಉಪ ವಲಯ ಅಧಿಕಾರಿ ಸುರೇಶ್ ಚಾಲನೆ ನೀಡಿ ವಿದ್ಯಾರ್ಥಿಗಳೊಂದಿಗೆ ತಾವು ಚಾರಣ ಕಾರ್ಯಕ್ರಮಕ್ಕೆ ಕೈ ಜೋಡಿಸಿದರು.
ಅರಣ್ಯ ಸಿಬ್ಬಂದಿಗಳ ಮಾರ್ಗದರ್ಶನದಂತೆ ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರಮಿಸಿ ತಡಿಯಂಡ ವೀರಾಜಪೇಟೆ, ಏ. ೨೩: ವೀರಾಜಪೇಟೆಯ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ ಪರಿಸರ ಪ್ರಜ್ಞೆ ಹಾಗೂ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಎನ್ಎಸ್ಎಸ್ ಘಟಕದ ವತಿಯಿಂದ ತಡಿಯಂಡ ಮೋಳ್ ಬೆಟ್ಟಕ್ಕೆ ಚಾರಣ ಮಾಡಲಾಯಿತು.
ವಿದ್ಯಾರ್ಥಿಗಳು ಅತಿ ಉತ್ಸಾಹದಿಂದ ಕಾರ್ಯಕ್ರಮ ಹಾಗೂ ಅಭಿಯಾನದಲ್ಲಿ ಪಾಲ್ಗೊಂಡರು. ಚಾರಣ ಕಾರ್ಯಕ್ರಮಕ್ಕೆ ಭಾಗಮಂಡಲ ವಲಯ ಅರಣ್ಯ ಉಪ ವಲಯ ಅಧಿಕಾರಿ ಸುರೇಶ್ ಚಾಲನೆ ನೀಡಿ ವಿದ್ಯಾರ್ಥಿಗಳೊಂದಿಗೆ ತಾವು ಚಾರಣ ಕಾರ್ಯಕ್ರಮಕ್ಕೆ ಕೈ ಜೋಡಿಸಿದರು.
ಅರಣ್ಯ ಸಿಬ್ಬಂದಿಗಳ ಮಾರ್ಗದರ್ಶನದಂತೆ ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರಮಿಸಿ ತಡಿಯಂಡ ಮಾತನಾಡಿ, ಪರಿಸರ ಎಂಬುವುದು ಒಂದು ಸಂಪನ್ಮೂಲವಾಗಿದ್ದು, ಮುಂದಿನ ಪೀಳಿಗೆಗೂ ಅದನ್ನು ರಕ್ಷಿಸುವ ಅಗತ್ಯವಿದೆ. ಹೀಗೆ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದೆ.
ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸಲು ಪಣ ತೊಡಬೇಕು, ಪರಿಸರವನ್ನು ರಕ್ಷಿಸಿದಲ್ಲಿ ಅದು ನಮ್ಮನ್ನು, ನಮ್ಮ ಆರೋಗ್ಯವನ್ನು ರಕ್ಷಿಸುತ್ತದೆ. ಜಾಗತಿಕ ತಾಪಮಾನ ಏರಿಕೆಯು ಅತ್ಯಂತ ಕಳವಳಕಾರಿ ಯಾಗಿದ್ದು, ವಿದ್ಯಾರ್ಥಿಗಳು ಅದರ ನಿಯಂತ್ರಣ ಕ್ರಮಗಳನ್ನು ಅರಿಯಬೇಕೆಂದರು.
ಈ ಸಂದರ್ಭ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಅರ್ಜುನ್, ಉಪನ್ಯಾಸಕರಾದ ಶಾಂತಿಭೂಷಣ್, ಶಶಿಕಲಾ, ಅರಣ್ಯ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.