ಆರ್.ಎಸ್.ಎಸ್. ವಿಘ್ನ ಸಂತೋಷಿಗಳ ಸಂಚು: ಸಿದ್ದರಾಮಯ್ಯ
ಬೆಂಗಳೂರು, ಏ. ೨೩: ಲಿಂಗಾಯತ ಸಿಎಂ ಕುರಿತಾಗಿ ತಮ್ಮ ಹೇಳಿಕೆಯನ್ನಿಟ್ಟುಕೊಂಡು ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸರಣೀ ಟ್ವೀಟ್ಗಳ ಮೂಲಕ ಬಿಜೆಪಿಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಪಕ್ಷದಲ್ಲಿರುವ ಲಿಂಗಾಯತ ಸಮುದಾಯದ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ನೋಡಿದಾಗ ‘ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ” ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ ಎಂದು ಹೇಳಿದ್ದಾರೆ. ಲಿಂಗಾಯತ ಸಮುದಾಯದ ವಿರುದ್ಧ ರಾಜ್ಯದಲ್ಲಿರುವ ಬಿಜೆಪಿ ನಾಯಕರೇ ಕೆಲಸ ಮಾಡುತ್ತಿರುವುದನ್ನು ಸಮುದಾಯ ಅರ್ಥ ಮಾಡಿಕೊಳ್ಳದೇ ಇರುವುದು ವಿಷಾದನೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್.ಎಸ್.ಎಸ್. ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿ ಪಕ್ಷದ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿ ಪಕ್ಷವನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು, ಜಗದೀಶ್ ಶೆಟ್ಟರ್ ಅವರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ ಗಳು, ಕಾಂಗ್ರೆಸ್ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಸೋಮಣ್ಣ ಅವರ ಬಗ್ಗೆಯೂ ಬರೆದಿರುವ, ಸಿದ್ದರಾಮಯ್ಯ, "ಒಲ್ಲೆನೆಂದರೂ ಬಲತ್ಕಾರವಾಗಿ ವರುಣಾ ಕ್ಷೇತ್ರದಲ್ಲಿ ವಿ. ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಮತ್ತು ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಆರ್.ಎಸ್.ಎಸ್.ನ ‘ವಿಘ್ನ ಸಂತೋಷಿ’ಗಳು ಎಂದು ಆರೋಪಿಸಿದ್ದಾರೆ.
‘ಜಂತರ್ ಮಂತರ್ನಿAದ ಕದಲುವುದಿಲ್ಲ':ಕುಸ್ತಿಪಟುಗಳಿಂದ ಪ್ರತಿಭಟನೆ
ನವದೆಹಲಿ, ಏ. ೨೩: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವAತೆ ಒತ್ತಾಯಿಸಿ ಭಾರತದ ಖ್ಯಾತ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ದೂರು ನೀಡಿದರೂ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸದ ಹಿನ್ನೆಲೆ ಕುಸ್ತಿಪಟುಗಳು ಜಂತರ್ ಮಂತರ್ನಲ್ಲಿ ಇಂದು ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ. ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವAತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಪ್ರಾಪ್ತೆ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ಎರಡು ದಿನಗಳ ಹಿಂದೆ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೂರು ನೀಡಿದ್ದೇವೆ. ಆದರೆ ಇದುವರೆಗೂ ಎಫ್ಐಆರ್ ದಾಖಲಿಸಿಲ್ಲ ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ. "ತ್ವರಿತವಾಗಿ ತನಿಖೆ ನಡೆಯಬೇಕೆಂದು ನಾವು ಬಯಸುತ್ತೇವೆ... ಆದರೆ ನಮ್ಮ ಆರೋಪವನ್ನು ಸುಳ್ಳು ಎಂದು ಬಿಂಬಿಸಲಾಗುತ್ತಿದೆ. ಎರಡೂವರೆ ತಿಂಗಳಿನಿAದ ನಾವು ಕಾಯುತ್ತಿದ್ದೇವೆ. ಆದರೆ ಯಾರೂ ನಮ್ಮ ಅಳಲು ಕೇಳುತ್ತಿಲ್ಲ. ನಾವು ಅಪ್ರಾಪ್ತೆಯ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ. ಆಕೆಯ ಹೆಸರು ಮತ್ತು ವೃತ್ತಿ ಜೀವನ ಹಾಳಾಗುತ್ತದೆ. ನಾವು ಕಾಮನ್ವೆಲ್ತ್ ಗೇಮ್ಸ್ ೨೦೨೨ ರಲ್ಲಿ ಪದಕ ಗೆದ್ದಿದ್ದೇವೆ ಎಂದು ಸಾಕ್ಷಿ ಮಲಿಕ್ ತಿಳಿಸಿದ್ದಾರೆ. "ಬ್ರಿಜ್ ಭೂಷಣ್ ಅವರನ್ನು ಬಂಧಿಸುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ" ಎಂದು ಖ್ಯಾತ ಕುಸ್ತಿಪಟು ಬಜರಂಗ್ ಪುನಿಯಾ ಎನ್ಡಿಟಿವಿಗೆ ಹೇಳಿದ್ದಾರೆ.
ಎಫ್ಐಆರ್ ದಾಖಲಿಸದ ದೆಹಲಿ ಪೊಲೀಸರಿಗೆ ನೋಟೀಸ್
ನವದೆಹಲಿ, ಏ. ೨೩: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳದ ದೂರಿಗೆ ಸಂಬAಧಿಸಿದAತೆ ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲ್ಯು) ಭಾನುವಾರ ನೋಟೀಸ್ ನೀಡಿದೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಇನ್ನೂ ಎಫ್ಐಆರ್ ದಾಖಲಿಸಿಲ್ಲ ಎಂದು ದೂರು ಬಂದಿರುವುದಾಗಿ ಮಹಿಳಾ ಆಯೋಗ ಹೇಳಿದೆ. "ಅಪ್ರಾಪ್ತ ಬಾಲಕಿ ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಶನ್ನಲ್ಲಿ ಬ್ರಿಜ್ ಭೂಷಣ್ ಅಧಿಕಾರಾವಧಿಯಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬAಧ ದೂರುದಾರರು ಆಯೋಗಕ್ಕೆ ಮಾಹಿತಿ ನೀಡಿದ್ದಾರೆ ಎಂದು ಡಿಸಿಡಬ್ಲ್ಯೂ ತಿಳಿಸಿದೆ.
ರೂ. ೨೫೦ ಕೋಟಿಗೂ ಅಧಿಕ ನಗದು-ವಸ್ತುಗಳು ಜಪ್ತಿ
ಬೆಂಗಳೂರು, ಏ. ೨೩: ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆಯಾದಾಗಿನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟು ೨೫೦ ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ. ೮೨ ಕೋಟಿ ರೂಪಾಯಿ ನಗದು, ೫೭ ಕೋಟಿ ರೂ.ಮೌಲ್ಯದ ಮದ್ಯ, ರೂ. ೭೮ ಕೋಟಿ ಮೊತ್ತದ ಬೆಳ್ಳಿ, ರೂ. ೨೦ ಕೋಟಿ ಮೊತ್ತದ ಗಿಫ್ಟ್, ರೂ. ೧೭ ಕೋಟಿ ಮೌಲ್ಯದ ಡ್ರಗ್ಸ್ ಸೇರಿದಂತೆ ಒಟ್ಟು ೨೫೦ ಕೋಟಿ ಮೊತ್ತದ ಅಕ್ರಮ ವಸ್ತು ವಶಕ್ಕೆ ಪಡೆಯಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬAಧಿಸಿದAತೆ ೧,೯೩೦ ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮೇ ೧೦ ರ ವಿಧಾನಸಭಾ ಚುನಾವಣೆಯ ಘೋಷಣೆಯ ಮೊದಲು ಸುಮಾರು ರೂ. ೫೮ ಕೋಟಿ ಮೌಲ್ಯದ ಅಕ್ರಮ ನಗದು, ವಸ್ತು ವಶಕ್ಕೆ ಪಡೆಯಲಾಗಿತ್ತು.
ಮತ್ತೆ ಪ್ರತಿಭಟನೆ ನಡೆಸಿದ ಇಸ್ರೇಲಿಗರು!
ಟೆಲ್ಅವೀವ್, ಏ. ೨೩: ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಸರ್ಕಾರದ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಸಾವಿರಾರು ಪ್ರತಿಭಟನಾಕಾರರು ಟೆಲ್ ಅವೀವ್ ಮತ್ತು ಇಸ್ರೇಲ್ನಾದ್ಯಂತದ ನಗರಗಳಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಇಸ್ರೇಲಿ ಪ್ರತಿಭಟನಾಕಾರರ ಗುಂಪುಗಳು ಟೆಲ್ ಅವಿವ್ನಲ್ಲಿ ಬ್ಯಾನರ್ಗಳನ್ನು ಹಿಡಿದಿದ್ದವು. ನ್ಯಾಯಾಂಗ ವ್ಯವಸ್ಥೆಯನ್ನು ಸುಧಾರಿಸುವ ನೆತನ್ಯಾಹು ಅವರ ಸರ್ಕಾರದ ಯೋಜನೆಗಳು ಇಸ್ರೇಲಿಗಳನ್ನು ಕೆರಳಿಸಿದೆ. ಪ್ರತಿಭಟನಾಕಾರರು ಇದನ್ನು ತಮ್ಮ ದೇಶದ ತಪಾಸಣೆ ಮತ್ತು ಸಮತೋಲನ ವ್ಯವಸ್ಥೆಯ ಮೇಲಿನ ದಾಳಿ ಮತ್ತು ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ನೋಡುತ್ತಿದ್ದಾರೆ ಎಂದು ಕೇಂದ್ರ ಟೆಲ್ ಅವೀವ್ನಲ್ಲಿ ನಡೆದ ರ್ಯಾಲಿಯಿಂದ ಯಹೂದಿ ಮಹಿಳೆಯರ ರಾಷ್ಟಿçÃಯ ಮಂಡಳಿಯ ಮುಖ್ಯಸ್ಥೆ ಶೀಲಾ ಕಾಟ್ಜ್ ಹೇಳಿದರು. ಪವಿತ್ರ ನ್ಯಾಯಾಲಯಗಳು ಎಲ್ಲಾ ಜನರ ಹಕ್ಕುಗಳನ್ನು ರಕ್ಷಿಸಲು, ಅವರು ರಾಜಕೀಯದಿಂದ ಸ್ವತಂತ್ರವಾಗಿರಬೇಕು ಎಂದು ಅವರು ನುಡಿದರು.