ಮಡಿಕೇರಿ, ಏ. ೨೩: ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು, ಉಡೋತ್ ಮೊಟ್ಟೆ ಶ್ರೀ ಆದಿಶಕ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ನೀಡಿದ ಚೆಕ್ಕನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ದಿನೇಶ್ ಹಾಗೂ ಸೇವಾ ಪ್ರತಿನಿಧಿ ಸಾಜು ಶ್ರೀ ಆದಿಶಕ್ತಿ ದೇವಸ್ಥಾನ ಟ್ರಸ್ಟಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕ ಬಿ.ಎಂ. ಎಲ್ಯಣ್ಣ, ಗೌರವಾಧ್ಯಕ್ಷ ಬಿ.ಎಂ. ಶೇಷಪ್ಪ, ಕಾರ್ಯದರ್ಶಿ ಜಯ ಬಿ.ಎಸ್., ಟ್ರಸ್ಟಿನ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.