ಸೋಮವಾರಪೇಟೆ, ಏ. ೨೩: ಯುವ ಜನತೆ ಪ್ರಜಾಪ್ರಭುತ್ವ ಸಿದ್ಧಾಂತವನ್ನು ಸರಿಯಾಗಿ ಅರ್ಥ ಮಾಡಿಕೊಂಡು ಮತವನ್ನು ಚಲಾಯಿಸಬೇಕು ಎಂದು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ದಿವ್ಯ ತಿಳಿಸಿದರು.
ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತç ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಕಾಲೇಜಿನ ಆವರಣದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಜಾಪ್ರಭುತ್ವದಲ್ಲಿ ಯುವಜನತೆಯ ಪಾತ್ರ ಕುರಿತು ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆ ನಿಂತಿರುವುದೇ ಮತದಾನದ ಆಧಾರದ ಮೇಲೆ. ಯುವ ಜನತೆಯಲ್ಲಿ ಸೂಕ್ತ ನಾಯಕನನ್ನು ಆಯ್ಕೆ ಮಾಡುವ ಸಂಪೂರ್ಣ ಅವಕಾಶ ಇದೆ. ಆ ನಿಟ್ಟಿನಲ್ಲಿ ಯೋಚಿಸಿ ಮತ ಚಲಾಯಿಸಬೇಕಾಗಿದೆ. ಹಣ ಸೇರಿದಂತೆ ಇತರೆ ಆಮಿಷಗಳಿಗೆ ಒಳಗಾಗದೆ, ನಿಮ್ಮ ಪವಿತ್ರ ಹಕ್ಕನ್ನು ಚಲಾಯಿಸಿದರೆ ಮಾತ್ರ ಗೆದ್ದ ವ್ಯಕ್ತಿಯಲ್ಲಿ ನೇರವಾಗಿ ತಮ್ಮ ಸಮಸ್ಯೆ ಮತ್ತು ಬೇಡಿಕೆ ಮುಂದಿಡಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯೆ ಧನಲಕ್ಷಿö್ಮÃ ಅವರು ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ಎಂ.ಎಸ್. ಶಿವಮೂರ್ತಿ, ರಾಜ್ಯಶಾಸ್ತç ಉಪನ್ಯಾಸಕ ವೇಣುಗೋಪಾಲ್ ಇದ್ದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವ ವಿಚಾರದ ಕುರಿತು ಭಾಷಣ ಸ್ಪರ್ಧೆ ನಡೆಯಿತು. ಪ್ರಥಮ ಬಹುಮಾನವನ್ನು ಪ್ರಥಮ ಬಿಕಾಂ ವಿದ್ಯಾರ್ಥಿ ಅಬ್ದುಲ್ ನಜೀರ್ ಹಾಗೂ ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಸಂಗೀತ ಪಡೆದರು. ದ್ವಿತೀಯ ಬಹುಮಾನವನ್ನು ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಮೌಲ್ಯ ಹಾಗೂ ತೃತೀಯ ಬಹುಮಾನವನ್ನು ತೃತೀಯ ಬಿಎ ವಿದ್ಯಾರ್ಥಿ ಪೃಥ್ವಿ ಮತ್ತು ತೃತೀಯ ಬಿ.ಕಾಂ.ನ ನಯನ್ ಪಡೆದರು.