ಮಡಿಕೇರಿ, ಏ.೨೪: ಡಾ.ರಾಜ್‌ಕುಮಾರ್ ಅವರು ಪೌರಾಣಿಕ, ಸಾಮಾಜಿಕ, ಹಾಡುಗಾರಿಕೆ ಹೀಗೆ ಚಿತ್ರರಂಗದ ವಿವಿಧ ಕೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಡಾ.ರಾಜ್‌ಕುಮಾರ್ ಅವರ ೯೫ ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ.ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಡಾ.ರಾಜ್‌ಕುಮಾರ್ ಅವರ ಸರಳತೆ, ಕಲಾಪ್ರತಿಭೆ ಮತ್ತು ಜೀವನ ಶೈಲಿಯಿಂದ ಚಿತ್ರರಂಗದಲ್ಲಿ ಅತ್ಯುನ್ನತ ಸ್ಥಾನಕ್ಕೆ ಬೆಳೆದರು ಎಂದು ವಿವರಿಸಿದರು. ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಬಾಲರಾಜ್ ರಂಗರಾವ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಇದ್ದರು.