ಸಿದ್ದಾಪುರ, ಏ. ೨೪ : ಗುಹ್ಯ ಗ್ರಾಮದ ಕಕ್ಕಟ್ಟುಕಾಡು ಬಳಿ ನದಿಯಲ್ಲಿ ಮುಳುಗಿ ಮೃತಪಟ್ಟ ಯುವಕನ ಮೃತದೇಹ ನಿನ್ನೆ ಪತ್ತೆಯಾಗಿದೆ. ಸ್ನೇಹಿತನ ತಾಯಿಯ ಅಂತ್ಯ ಸಂಸ್ಕಾರಕ್ಕೆ ತೆರಳಿ ನಂತರ ಕಾವೇರಿ ನದಿಗೆ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ರಾಜೇಂದ್ರ (೩೨) ಎಂಬಾತ ನೀರಿನಲ್ಲಿ ಶುಕ್ರವಾರ ಮುಳುಗಿ ಮೃತಪಟ್ಟಿದ್ದ. ಆದರೆ ಈತನ ಮೃತದೇಹ ಪತ್ತೆ ಆಗಿರಲಿಲ್ಲ. ಭಾನುವಾರದಂದು ದುಬಾರೆಯ ಮುಳುಗು ತಜ್ಞರು ಹಾಗೂ ಸ್ಥಳೀಯರ ನೆರವಿನೊಂದಿಗೆ ಶೋಧ ಕಾರ್ಯ ನಡೆಸಿದಾಗ ಮೃತದೇಹ ಪತ್ತೆ ಆಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಪೊಲೀಸರ ಸಮ್ಮುಖದಲ್ಲಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು.