*ಗೋಣಿಕೊಪ್ಪ, ಏ. ೨೪: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾಸ್ಪತ್ರೆ, ವೀರಾಜಪೇಟೆ ರೋಟರಿ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಪ್ರವಾಸ ಕೋಶ ಸಂಯುಕ್ತಾಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತ ಗುಂಪು ಪರೀಕ್ಷೆ ನಡೆಯಲಿದೆ.
ತಾ. ೨೫ ರಂದು ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ ೧೦:೩೦ ಗಂಟೆಗೆ ಶಿಬಿರಕ್ಕೆ ಚಾಲನೆ ದೊರೆಯಲಿದ್ದು, ವೀರಾಜಪೇಟೆ ರೋಟರಿ ಕ್ಲಬ್ ಅಧ್ಯಕ್ಷ ಹರಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ಅಧ್ಯಕ್ಷತೆಯಲ್ಲಿ ಮಡಿಕೇರಿ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ. ಕರುಂಬಯ್ಯ, ಜಿಲ್ಲಾ ಯುವ ರೆಡ್‌ಕ್ರಾಸ್ ಅಧ್ಯಕ್ಷ ಎಂ. ಧನಂಜಯ, ವೀರಾಜಪೇಟೆ ರೋಟರಿ ಕ್ಲಬ್ ಕಾರ್ಯದರ್ಶಿ ಡಾ. ನರಸಿಂಹನ್, ಕಾಲೇಜು ಐ.ಕ್ಯೂ.ಎ.ಸಿ. ಸಂಚಾಲಕ ನಾಗರಾಜು ಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.