ಶನಿವಾರಸಂತೆ: ಹಿಂದಿನ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಮೆಚ್ಚಿಕೊಂಡಿರುವ ಮತದಾರರು ಕೊಡಗಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಅವರನ್ನು ಆಯ್ಕೆ ಮಾಡಲು ಬಯಸಿದ್ದಾರೆ ಎಂದು ಜಿಲ್ಲೆಯ ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಎಂ. ಚಂಗಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಪಟ್ಟಣದ ಐ.ಬಿ. ರಸ್ತೆಯಲ್ಲಿ ಶನಿವಾರಸಂತೆ ಹೋಬಳಿ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಹಿರಿಯ ಮುಖಂಡ ಎಸ್.ಕೆ. ವೀರಪ್ಪ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಾಕೇರಿ ಸತೀಶ್, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಅನಂತ್ ಕುಮಾರ್, ಮುಖಂಡರಾದ ಎನ್.ಕೆ. ಅಪ್ಪಸ್ವಾಮಿ, ರಂಗಸ್ವಾಮಿ, ಎನ್.ಬಿ. ನಾಗಪ್ಪ, ಬಿ.ಕೆ. ಚಿಣ್ಣಪ್ಪ, ಜಿ.ಎಂ. ಕಾಂತರಾಜ್, ಸಿ.ಜೆ. ಗಿರೀಶ್, ಸರೋಜಾ ಶೇಖರ್, ಸೌಭಾಗ್ಯಲಕ್ಷಿö್ಮÃ ಇತರರು ಹಾಜರಿದ್ದರು.ಕೊಡ್ಲಿಪೇಟೆ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಅವರು ಕೊಡ್ಲಿಪೇಟೆ ಭಾಗದಲ್ಲಿ ದೇವಾಲಯಗಳಿಗೆ ಭೇಟಿ ನೀಡಿ, ನಂತರ ಮತಯಾಚನೆ ನಡೆಸಿದರು.
ಬಸವ ಜಯಂತಿ ಪ್ರಯುಕ್ತ ಪಟ್ಟಣದ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್, ವಿಶೇಷ ಪೂಜೆ ಸಲ್ಲಿಸಿ, ನಂತರ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ೧೦೧ ತೆಂಗಿನಕಾಯಿಗಳನ್ನು ಒಡೆಯುವ ಮೂಲಕ ಪೂಜೆ ಸಲ್ಲಿಸಿದರು.
ಪಟ್ಟಣದಲ್ಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರಚಾರ ನಡೆಸಿದ ಅಪ್ಪಚ್ಚು ರಂಜನ್ ಕಿರಿಕೊಡ್ಲಿ ಶಾಲೆ ಬಳಿ, ಕೆರಗನಹಳ್ಳಿ ಆಸ್ಪತ್ರೆ ಹತ್ತಿರ, ಕಲ್ಲುಕೋರೆ, ದೊಡ್ಡಕೊಡ್ಲಿ, ಬೆಸೂರು, ಕಟ್ಟೆಪುರ, ಚಿಕ್ಕಭಂಡಾರ, ಚಿಕ್ಕಕುಂದ, ಕೂಡಲೂರು, ದೊಡ್ಡಭಂಡಾರ, ನೀರುಗುಂದ, ಬ್ಯಾಡಗೊಟ್ಟ ಹ್ಯಾಂಡ್ ಪೋಸ್ಟ್, ಬೆಂಬಳೂರು, ಊರುಗುತ್ತಿ, ಕ್ಯಾತೆ, ಕಾಗಡಿಕಟ್ಟೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮತಯಾಚಿಸಿದರು.
ಈ ಸಂದರ್ಭ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಮುಖಂಡರುಗಳಾದ ಅಭಿಮನ್ಯು ಕುಮಾರ್, ಬಿ.ಬಿ. ಭಾರತೇಶ್, ವಿ.ಎಂ. ವಿಜಯ, ಹೆಚ್.ಕೆ. ಮಾದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಿದ್ದಾಪುರ: ಈ ಬಾರಿ ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ಕೆ. ಶಿವದಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.
ನೆಲ್ಲಿಹುದಿಕೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಹಾಗೂ ಮನೆ ಮನೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಡಿಕೇರಿ ಕ್ಷೇತ್ರವು ಕಳೆದ ೨೫ ವರ್ಷಗಳಿಂದ ಬಿಜೆಪಿಯ ಹಿಡಿತದಲ್ಲಿತ್ತು, ಆದರೆ ಇದೀಗ ಕ್ಷೇತ್ರದಲ್ಲಿ ಎಲ್ಲಾ ವರ್ಗಗಳ ಅಭಿವೃದ್ಧಿಯ ಹಿತ ದೃಷ್ಟಿಯಿಂದ ನಾಪಂಡ ಮುತ್ತಪ್ಪನವರು ಕೈಗೊಂಡಿರುವ ಹಲವಾರು ಕಾರ್ಯಕ್ರಮಗಳು ಮತದಾರರು ಜೆಡಿಎಸ್ನತ್ತ ಒಲವು ತೋರಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಜಯಗಳಿಸಲಿದೆ ಎಂದರು. ಅಲ್ಲದೆ ನಾಪಂಡ ಮುತ್ತಪ್ಪನವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ನೆರವು ನೀಡುವ ಮೂಲಕ ಸಾಮಾಜಿಕ ಕಳಕಳಿಯ ವ್ಯಕ್ತಿತ್ವವನ್ನು ಹೊಂದಿದವರಾಗಿದ್ದು, ಅವರ ವ್ಯಕ್ತಿತ್ವದಿಂದಲೇ ಇಂದು ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಜೆಡಿಎಸ್ ಪಕ್ಷವು ತನ್ನ ಅಧಿಕಾರಾವಧಿಯಲ್ಲಿ ಮದ್ಯ ನಿಷೇಧ, ಲಾಟರಿ ನಿಷೇಧ, ರೈತರ ಸಾಲ ಮನ್ನದಂತ ಅನೇಕ ಜನಪರ ಯೋಜನೆಗಳ ಮೂಲಕ ಮನೆ ಮಾತಾಗಿದ್ದು ರಾಷ್ಟಿçÃಯ ಪಕ್ಷಗಳ ಆಡಳಿತದಿಂದ ಬೇಸತ್ತ ಮತದಾರರು ಈ ಬಾರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದರು.
ಈ ಸಂದರ್ಭ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಜೆಡಿಎಸ್ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಯುವ ಜನತಾ ದಳದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶರತ್, ಪಕ್ಷದ ಪ್ರಮುಖರಾದ ರಫೀಕ್, ಅಬಿ, ಮಂಜು ಇನ್ನಿತರರು ಹಾಜರಿದ್ದರು.ನಾಪೋಕ್ಲು: ವೀರಾಜಪೇಟೆ ಕ್ಷೇತ್ರದ ಎಲ್ಲಾ ಭಾಗಗಳಲ್ಲಿ ಸಂಚರಿಸಿದ್ದು, ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಕ್ಷೇತ್ರದ ಹಲವೆಡೆ ರಸ್ತೆ, ವಸತಿ, ನೀರು, ವಿದ್ಯುತ್ಗೆ ಪರದಾಡುವ ಪರಿಸ್ಥಿತಿ ಇದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ವೀರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಹೇಳಿದರು.
ನಾಪೋಕ್ಲು ಪಟ್ಟಣದಲ್ಲಿ ಪಕ್ಷದ ಪರವಾಗಿ ಪ್ರಚಾರ ನಡೆಸಿ ಅವರು ಮತಯಾಚಿಸಿದರು. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರವಾದ ಆಶ್ವಾಸನೆಗಳನ್ನು ನೀಡಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ವೀರಾಜಪೇಟೆ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿ ಸಾಧಿಸಲಾಗುವುದು ಎಂದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಇದುವರೆಗಿನ ಸರ್ಕಾರ ಸುಳ್ಳನ್ನು ಹೇಳುತ್ತಾ ಜನರಿಗೆ ತಪ್ಪು ಮಾಹಿತಿ ನೀಡುತ್ತಾ ಅಧಿಕಾರ ಮಾಡಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಜನ ಬದಲಾವಣೆ ಬಯಸಿದ್ದಾರೆ ಎಂದರು.
ಮಾಜಿ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವAತಹ ಸರ್ಕಾರದ ರಚನೆಗೆ ಆದ್ಯತೆ ನೀಡಬೇಕಾಗಿದೆ. ಇಲಾಖೆಗಳಲ್ಲಿನ ಭ್ರಷ್ಟಾಚಾರವನ್ನು ನಿರ್ಮಾಣ ನಿರ್ಮೂಲನೆ ಮಾಡಬೇಕಾಗಿದೆ ಎಂದರು. ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಎಂ.ಹೆಚ್. ಅಬ್ದುಲ್ ರಹಿಮಾನ್, ಕೊಡಗು ಜಿಲ್ಲಾ ಪರಿಷತ್ತು ಮಾಜಿ ಉಪಾಧ್ಯಕ್ಷ ಪಿ.ಎಂ. ಖಾಸಿಂ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಮಾತನಾಡಿದರು. ಬಳಿಕ ಕಾರ್ಯಕರ್ತರು ಅಂಗಡಿ ಮತ್ತು ಮನೆಮನೆಗೆ ತೆರಳಿ ಪಕ್ಷದ ಪರವಾಗಿ ಮತಯಾಚಿಸಿದರು.
ಈ ಸಂದರ್ಭ ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಕೊಡವ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಕಕ್ಕಬೆ ಇಗ್ಗುತ್ತಪ್ಪ ದೇವಾಲಯದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಬಾಚಮಂಡ ಲವ ಚಿನ್ನಪ್ಪ, ನಾಪೋಕ್ಲು ಕಾಂಗ್ರೆಸ್ ಅಧ್ಯಕ್ಷ ಮಾಚೇಟಿರ ಕುಶು ಕುಶಾಲಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಲೀಂ ಹ್ಯಾರಿಸ್, ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕರ್ತಂಡ ಶೈಲ ಕುಟ್ಟಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಬೊಳ್ಳಂಡ ಶರೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಶಿರಾಜ್, ರಾಣಿ ಅಪ್ಪಣ್ಣ ಪೇರೂರು, ಅನೀಫ್, ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬಾ ಸೇರಿದಂತೆ ಇತರ ಸದಸ್ಯರು. ವಿವಿಧ ಗ್ರಾಮ ಪಂಚಾಯಿತಿ ಸದಸ್ಯರು, ಕಾಂಗ್ರೆಸ್ನ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.ಸೋಮವಾರಪೇಟೆ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸೋಮವಾರಪೇಟೆ ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಕಾಂಗ್ರೆಸ್ ಪ್ರಚಾರ ರಥದೊಂದಿಗೆ ಪಟ್ಟಣದ ಕಕ್ಕೆಹೊಳೆ ಜಂಕ್ಷನ್ನಿAದ ಸಿ.ಕೆ. ಸುಬ್ಬಯ್ಯ ರಸ್ತೆ, ಖಾಸಗಿ ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ ಸೇರಿದಂತೆ ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ತೆರಳಿ ವರ್ತಕರು, ಗ್ರಾಹಕರು ಹಾಗೂ ಸಾರ್ವಜನಿಕರಿಂದ ಮತಯಾಚನೆ ಮಾಡಿದರು.
ಈ ಸಂದರ್ಭ ಮಾತನಾಡಿದ ಅಭ್ಯರ್ಥಿ ಡಾ. ಮಂಥರ್ ಗೌಡ ಅವರು, ಈ ಬಾರಿ ಕ್ಷೇತ್ರದಲ್ಲಿ ಬದಲಾವಣೆ ನಿಶ್ವಿತ, ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಕಾಂಗ್ರೆಸ್ಗೆ ಜನತೆ ಆಶೀರ್ವಾದ ಮಾಡಲಿದ್ದಾರೆ. ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಾ. ಮಂಥರ್ ಅವರೊಂದಿಗೆ ಕಾಂಗ್ರೆಸ್ ಮುಖಂಡರಾದ ಹೆಚ್.ಎಸ್. ಚಂದ್ರಮೌಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್, ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ವಿ.ಎ. ಲಾರೆನ್ಸ್, ಕೆ.ಎ. ಆದಂ, ಹೆಚ್.ಎ. ನಾಗರಾಜು, ಶೀಲಾ ಡಿಸೋಜ, ಬಿ.ಸಿ. ವೆಂಕಟೇಶ್, ಬಿ.ಎಸ್. ಅನಂತ್ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಸೋಮವಾರಪೇಟೆ: ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಭಾರತ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿರುವ ಹೆಚ್.ಎಂ. ಸೋಮಪ್ಪ ಅವರು ತಮ್ಮ ಬೆಂಬಲಿಗರೊAದಿಗೆ ಪಟ್ಟಣದಲ್ಲಿ ಮತಯಾಚನೆ ಮಾಡಿದರು.
ಪಟ್ಟಣದ ಖಾಸಗಿ ಬಸ್ ನಿಲ್ದಾಣ ವ್ಯಾಪ್ತಿಯಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮಾಲೀಕರು ಮತ್ತು ಗ್ರಾಹಕರಿಗೆ ಪ್ರಚಾರ ಪತ್ರಗಳನ್ನು ನೀಡಿ, ಮತ ನೀಡುವಂತೆ ಮನವಿ ಮಾಡಿದರು.ಕೊಡ್ಲಿಪೇಟೆ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ೧೫೦ಕ್ಕೂ ಅಧಿಕ ಸ್ಥಾನ ಗಳಿಸಲಿದ್ದು, ಕೊಡಗು ಸೇರಿದಂತೆ ಕರ್ನಾಟಕವೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಶಾಸಕ ಹಾಗೂ ವಿದಾನ ಸಭಾ ಚುನಾವಣೆ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಕೊಡ್ಲಿಪೇಟೆಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆ ಈಗಾಗಲೇ ಕಾಂಗ್ರೆಸ್ ಮುಕ್ತವಾಗಿದೆ. ಈ ಬಾರಿಯ ವಿಧಾನ ಸಭಾ ಚುನಾವಣೆಗಳ ನಂತರ ಕರ್ನಾಟಕ ರಾಜ್ಯ ಕೂಡ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು.
ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಸ್ಥಳೀಯ ಅಭ್ಯರ್ಥಿಗಳೇ ಸಿಕ್ಕಿಲ್ಲ. ಇಬ್ಬರೂ ಜಿಲ್ಲೆಯ ಹೊರಭಾಗದಲ್ಲಿ ನೆಲೆಸಿರುವವರು. ಇವರುಗಳಿಗೆ ಕ್ಷೇತ್ರಗಳ ಪರಿಚಯವೂ ಇಲ್ಲ ಎಂದ ಅವರು,
ಕಾಂಗ್ರೆಸ್ ಪಕ್ಷಕ್ಕೆ ಕೊಡಗಿನಲ್ಲಿ ಸ್ಥಳೀಯ ಅಭ್ಯರ್ಥಿಗಳೇ ಸಿಗದಿರುವುದು ಆ ಪಕ್ಷದ ವಸ್ತು ಸ್ಥಿತಿಗೆ ಸಾಕ್ಷಿಯಾಗಿದೆ ಎಂದರು. ಈ ಬಾರಿ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಮತದಾರರು ಬಿಜೆಪಿ ಪರವಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿವೆ ತಲುಪಿವೆ ಎಂದು ರಂಜನ್ ಹೇಳಿದರು. ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಬಿ.ಬಿ. ಭಾರತೀಶ್, ಡಾ. ನವೀನ್ ಕುಮಾರ್, ಎಸ್.ಜಿ. ಮೇದಪ್ಪ, ಹೆಚ್.ಕೆ. ಮಾದಪ್ಪ, ಅಭಿಮನ್ಯುಕುಮಾರ್, ವಿ.ಎಂ. ವಿಜಯ, ಭುವನೇಶ್ವರಿ, ಕುಶಾಲಪ್ಪ, ಜೆ.ಸಿ. ಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಉಸ್ತುವಾರಿಯಾಗಿ ಅಬುಶಾಲಿ ಗೂನಡ್ಕ ನೇಮಕ
ವೀರಾಜಪೇಟೆ: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಘಟಕದ ಉಸ್ತುವಾರಿಯಾಗಿ ಕೆ.ಪಿ.ಸಿ.ಸಿ. ಕಾರ್ಯದರ್ಶಿಯು ದ.ಕ. ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯ ಅಬುಶಾಲಿ ಗೂನಡ್ಕ ನೇಮಕವಾಗಿದ್ದಾರೆ.
ಇವರು ಮಡಿಕೇರಿ-ಕಾಟಕೇರಿ ಗ್ರಾಮದ ಮದೆನಾಡು ಗ್ರಾಮ ಪಂಚಾಯಿತಿಗೆ ಎರಡು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ನೇಮಕ ಮಾಡಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಕಾನೂನು ಮಾನವ ಹಕ್ಕುಗಳ ಘಟಕದ ರಾಜ್ಯ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅವರ ಶಿಫಾರಸಿನ ಮೇರೆಗೆ ರಾಜ್ಯದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವಿಧಾನ ಪರಿಷತ್ ಸದಸ್ಯ ಜಬ್ಬಾರ್ ಅವರು ಇವರನ್ನು ನೇಮಕ ಮಾಡಿದ್ದಾರೆ.ಜೆಡಿಎಸ್ಗೆ ಸೂದನ ಎಸ್. ಈರಪ್ಪ ರಾಜೀನಾಮೆ
ಮಡಿಕೇರಿ: ಜಾತ್ಯತೀತ ಜನತಾದಳದ ಜಿಲ್ಲಾ ವಕ್ತಾರ ಸೂದನ ಎಸ್. ಈರಪ್ಪ ಅವರು ಪಕ್ಷಕ್ಕೆÀ ರಾಜೀನಾಮೆ ಸಲ್ಲಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ ೨೫ ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ಸಂಘಟನೆಯ ದೌರ್ಬಲ್ಯ, ಗುಂಪುಗಾರಿಕೆ ಹಾಗೂ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾರ್ಯಕರ್ತರ ಕಡೆಗಣನೆಯಿಂದ ಬೇಸತ್ತು ಪಕ್ಷಕ್ಕೆ ಮತ್ತು ವಕ್ತಾರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಇನ್ನು ಮುಂದೆ ಪಕ್ಷಾತೀತವಾಗಿ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯನಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಹೇಳಿದ್ದಾರೆ.ಸೋಮವಾರಪೇಟೆ: ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಅವರು ಶಾಂತಳ್ಳಿ, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು.
ಶಾಂತಳ್ಳಿ, ಬೆಟ್ಟದಳ್ಳಿ, ಹೆಮ್ಮನಗದ್ದೆ, ಬೀಕಳ್ಳಿ, ಪುಷ್ಪಗಿರಿ, ನಗರಳ್ಳಿ, ಅಭಿಮಠ ಬಾಚಳ್ಳಿ, ಕುಂದಳ್ಳಿ, ತಲ್ತರೆಶೆಟ್ಟಳ್ಳಿ, ಹರಗ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿ, ಬದಲಾವಣೆಗಾಗಿ ಕಾಂಗ್ರೆಸ್ ಬೆಂಬಲಿಸುವAತೆ ಮನವಿ ಮಾಡಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಮುಖಂಡರಾದ ಹರಪಳ್ಳಿ ರವೀಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.ಗುಡ್ಡೆಹೊಸೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಥರ್ ಗೌಡ ಅವರು ಗುಡ್ಡೆಹೊಸೂರು ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡಿದರು.ಕೂಡಿಗೆ: ಕೂಡುಮಂಗಳೂರು ಮತ್ತು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಪಕ್ಷದ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಕುಶಾಲನಗರ ಪುರಸಭೆ ಅಧ್ಯಕ್ಷ ಜಯವರ್ಧನ್, ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎಂ.ಎನ್. ಕುಮಾರಪ್ಪ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ನಾಯಕ್, ಸದಸ್ಯರಾದ, ಚಂದ್ರು ಮೂಡ್ಲಿಗೌಡ, ಗಿರೀಶ್ ಪಕ್ಷದ ಪ್ರಮುಖರಾದ ಕಿಶೋರ್ಕುಮಾರ್, ಆದರ್ಶ, ಪ್ರಮೀಣ್, ಪುಂಡರೀಕಾಕ್ಷ, ಕಿರಣ್, ಕೂಡುಮಂಗಳೂರು ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಮೀಣ್, ಮಂಜುನಾಥ, ಕೂಡಿಗೆ ಶಕ್ತಿ ಕೇಂದ್ರದ ಅಧ್ಯಕ್ಷ ಕೆ.ಟಿ. ಗಿರೀಶ್, ಕೂಡಿಗೆ ಬೂತ್ ಅಧ್ಯಕ್ಷ ಲೊಕೇಶ್, ಪ್ರಮುಖ್ ರವಿಕುಮಾರ್, ಪ್ರಭಾಕರ್, ಯೋಗೇಶ್, ಅರುಣ್ ಕುಮಾರ್ ವಿವಿಧ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು.ಕುಶಾಲನಗರ: ಮಡಿಕೇರಿ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಕುಶಾಲನಗರದಲ್ಲಿ ಮತಯಾಚಿಸಿದರು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಮತದಾರರ ಬಳಿ ತೆರಳಿ ಮತ ನೀಡುವಂತೆ ಮನವಿ ಮಾಡಿದರು. ಪಕ್ಷದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸಿರ್, ಜಿಲ್ಲಾ ಘಟಕದ ಉಪಾಧ್ಯಕ್ಷg ಹೆಚ್.ಡಿ. ಚಂದ್ರ, ತಾಲೂಕು ಘಟಕದ ಅಧ್ಯಕ್ಷ ಪಿ.ಡಿ. ರವಿಕುಮಾರ್ ಮತ್ತಿತರರು ಇದ್ದರು.ಕುಶಾಲನಗರ: ಮಡಿಕೇರಿ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಕುಶಾಲನಗರದಲ್ಲಿ ಮತಯಾಚಿಸಿದರು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಮತದಾರರ ಬಳಿ ತೆರಳಿ ಮತ ನೀಡುವಂತೆ ಮನವಿ ಮಾಡಿದರು. ಪಕ್ಷದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸಿರ್, ಜಿಲ್ಲಾ ಘಟಕದ ಉಪಾಧ್ಯಕ್ಷg ಹೆಚ್.ಡಿ. ಚಂದ್ರ, ತಾಲೂಕು ಘಟಕದ ಅಧ್ಯಕ್ಷ ಪಿ.ಡಿ. ರವಿಕುಮಾರ್ ಮತ್ತಿತರರು ಇದ್ದರು.ಕುಶಾಲನಗರ: ಮಡಿಕೇರಿ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಕುಶಾಲನಗರದಲ್ಲಿ ಮತಯಾಚಿಸಿದರು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಮತದಾರರ ಬಳಿ ತೆರಳಿ ಮತ ನೀಡುವಂತೆ ಮನವಿ ಮಾಡಿದರು. ಪಕ್ಷದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸಿರ್, ಜಿಲ್ಲಾ ಘಟಕದ ಉಪಾಧ್ಯಕ್ಷg ಹೆಚ್.ಡಿ. ಚಂದ್ರ, ತಾಲೂಕು ಘಟಕದ ಅಧ್ಯಕ್ಷ ಪಿ.ಡಿ. ರವಿಕುಮಾರ್ ಮತ್ತಿತರರು ಇದ್ದರು.ಕುಶಾಲನಗರ: ವಿಧಾನಸಭಾ ಚುನಾವಣೆಗೆ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಸ್ಪರ್ಧಿಸಿರುವ ಹೆಚ್.ಎಂ. ಸೋಮಪ್ಪ ಅವರು ಕುಶಾಲನಗರದಲ್ಲಿ ಮತಯಾಚನೆ ಮಾಡಿದರು.