ಕುಶಾಲನಗರ, ಏ.೨೫ : ಜಿಲ್ಲೆಯ ಗಡಿಭಾಗ ಶಿರಂಗಾಲ ಚುನಾವಣಾ ಚೆಕ್‌ಪೋಸ್ಟ್ನಲ್ಲಿ ಕುಶಾಲನಗರ ಕಡೆಗೆ ಸಾಗಿಸುತ್ತಿದ್ದ ಡೈರಿ ಮತ್ತು ಕ್ಯಾಲೆಂಡರ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಶಿರಂಗಾಲ ಗೇಟ್ ಬಳಿ ಚುನಾವಣಾ ಅಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಸಂದರ್ಭ ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ಸಾಗಿಸುತ್ತಿದ್ದ ಡೈರಿಗಳನ್ನು ಮತ್ತು ಕ್ಯಾಲೆಂಡರ್‌ಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.