ಮಡಿಕೇರಿ, ಏ. ೨೫ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಶಂಕರಾಚಾರ್ಯರ’ ಜಯಂತಿ ಯನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.
ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.
ಲೋಕೋಪಯೋಗಿ ಇಲಾಖೆ ಯ ಕಾರ್ಯಪಾಲಕ ಎಂಜಿನಿಯರ್ ನಾಗರಾಜು, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿAiನಿರ್ದೇಶಕರಾದ ಡಾ.ಬಾಲರಾಜ್ ರಂಗರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾ ಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣ ಜೂರು ಮಂಜುನಾಥ್ ಇತರರು ಇದ್ದರು.