ವೀರಾಜಪೇಟೆ, ಏ. ೨೫: ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೋಮವಾರ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಹೇಳಿಕೆಯ ವೀಡಿಯೋ ಅಪ್‌ಲೋಡ್ ಮಾಡಿದ್ದಾರೆಂದು ಆರೋಪಿಸಿ ಮಂಡೇಟಿರ ಅನಿಲ್ ಎಂಬವರು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾರ್ಯಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.