ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರವಿಲ್ಲ: ಸಿಎಂ

ಬೆAಗಳೂರು, ಏ. ೨೫: ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಜ್ಯ ಸೃರ್ಕಾರದ ಒಳ ಮೀಸಲಾತಿ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಧಾರವಾಡದ ಉಪ್ಪಿನಬೆಟಗೇರಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಮೇ ೯ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು. ಅಂತೆಯೇ ಮುಸ್ಲಿಂ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಎಂದರು.

ಮುಸ್ಲಿಮರ ೨ಬಿ ಮೀಸಲಾತಿ ರದ್ದು: ಮೇ ೯ ರವರೆಗೆ ಅನುಷ್ಠಾನ ಬೇಡ- ಸುಪ್ರೀಂ ಕೋರ್ಟ್

ನವದೆಹಲಿ, ಏ. ೨೫: ಮುಸ್ಲಿಮರಿಗೆ ಶೇ. ೪ ರಷ್ಟು ಮೀಸಲಾತಿ ರದ್ದುಗೊಳಿಸುವ ಕರ್ನಾಟಕ ಸರಕಾರದ ಆದೇಶ ಮೇ ೯ ರವರೆಗೆ ಅನುಷ್ಠಾನವಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಪ್ರತಿಕ್ರಿಯೆಗೆ ರಾಜ್ಯ ಸರ್ಕಾರ ಸಮಯಾವಕಾಶ ಕೇಳಿದ ನಂತರ ಉನ್ನತ ನ್ಯಾಯಾಲಯ ಈ ಆದೇಶ ನೀಡಿದೆ. ಮುಂದಿನ ವಿಚಾರಣೆ ಮೇ ೯ ರವರೆಗೂ ಮುಸ್ಲಿಮರಿಗೆ ಈ ಹಿಂದೆ ಇದ್ದ ಶೇ. ೪ ರಷ್ಟು ಕೋಟಾ ಮುಂದುವರೆಯುತ್ತದೆ ಎಂದು ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು. ಮುಂದಿನ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. ಬೇರೆ ದಿನದಂದು ಈ ವಿಷಯದ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, ಮೆಹ್ತಾ ಮನವಿಯನ್ನು ವಿರೋಧಿಸಿದರು ಮತ್ತು ವಿಚಾರಣೆಯನ್ನು ಈಗಾಗಲೇ ನಾಲ್ಕು ಬಾರಿ ಮುಂದೂಡಲಾಗಿದೆ. ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವು ಈಗಾಗಲೇ ಅರ್ಜಿದಾರರ ಪರವಾಗಿದೆ ಎಂದು ತಿಳಿಸಿದರು. ಮುಸಲ್ಮಾನರ ಕೋಟಾವನ್ನು ಕಾರ್ಯಗತ ಗೊಳಿಸಲಾಗುವುದಿಲ್ಲ ಮತ್ತು ಮುಂದಿನ ವಿಚಾರಣೆವರೆಗೂ ಮುಸ್ಲಿಮರ ೨ಬಿ ಮೀಸಲಾತಿ ರದ್ದುಪಡಿಸುವ ಆದೇಶವನ್ನು ಅನುಷ್ಠಾನ ಗೊಳಿಸುವುದಿಲ್ಲ ಎಂಬ ಮೆಹ್ತಾ ಅವರ ಹೇಳಿಕೆಯನ್ನು ದಾಖಲಿಸಿ ಕೊಳ್ಳುವಂತೆ ದುಶ್ಯಂತ್ ದವೆ ನ್ಯಾಯಾಲಯವನ್ನು ಕೇಳಿದರು. ದಾವೆ ಅವರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಮೆಹ್ತಾ ಅವರ ಹೇಳಿಕೆ ದಾಖಲಿಸಿಕೊಂಡು, ಮುಂದಿನ ವಿಚಾರಣೆಯನ್ನು ಮೇ ೯ಕ್ಕೆ ಮುಂದೂಡಿತು.

ರಾಜ್ಯ ಬಿಜೆಪಿ ಸರ್ಕಾರದಿಂದ ರೂ. ೧.೫ ಲಕ್ಷ ಕೋಟಿ ಲೂಟಿ: ಪ್ರಿಯಾಂಕಾ ಗಾಂಧಿ

ಟಿ. ನರಸೀಪುರ, ಏ. ೨೫: ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರೂ. ೧.೫ ಲಕ್ಷ ಕೋಟಿ ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ. ಮೇ ೧೦ ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಹೆಳವರಹುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರೆ ಅವರು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ರಾಜ್ಯದಲ್ಲಿ ಇದ್ದ ಶೇ. ೪೦ ಕಮಿಷನ್ ಸರ್ಕಾರ ನಿಮ್ಮನ್ನು ಲೂಟಿ ಮಾಡಿರುವುದು ಅತ್ಯಂತ ದುಃಖಕರ ಸಂಗತಿ. ಬಿಜೆಪಿಯವರು ಯಾವುದೇ ನಾಚಿಕೆ ಇಲ್ಲದೆ ಲೂಟಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ವಿವಿಧ ಹಗರಣಗಳ ಆರೋಪಗಳು, ಗುತ್ತಿಗೆದಾರರ ಆತ್ಮಹತ್ಯೆ ಮತ್ತು ಗುತ್ತಿಗೆದಾರರಿಂದ ಪ್ರಧಾನಿಗೆ ಪತ್ರ ಮತ್ತಿತರ ವಿಚಾರಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಿಯಾಂಕಾ ಗಾಂಧಿ, ಬಿಜೆಪಿಯಲ್ಲಿ ಅನೇಕ ಮಂದಿ ಶಾಮೀಲಾಗಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ, ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮನೀಶ್ ಸಿಸೋಡಿಯಾ ವಿರುದ್ಧ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ

ನವದೆಹಲಿ, ಏ. ೨೫: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರ ವಿರುದ್ಧ ಸಿಬಿಐ ಮಂಗಳವಾರ ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆಬ್ರವರಿ ೨೬ ರಂದು ಸಿಬಿಐ ಸಿಸೋಡಿಯಾ ಅವರನ್ನು ಬಂಧಿಸಿತ್ತು ಮತ್ತು ೫೮ನೇ ದಿನದಂದು ಚಾರ್ಜ್ ಶೀಟ್ ಸಲ್ಲಿಸಿದೆ. ಹೈದರಾಬಾದ್ ಮೂಲದ ಸಿ.ಎ. ಬುಚ್ಚಿ ಬಾಬು ಗೋರಂಟ್ಲಾ, ಮದ್ಯದ ವ್ಯಾಪಾರಿ ಅಮನದೀಪ್ ಸಿಂಗ್ ಧಲ್ ಮತ್ತು ಖಾಸಗಿ ವ್ಯಕ್ತಿ ಅರ್ಜುನ್ ಪಾಂಡೆ ಅವರನ್ನೂ ಚಾರ್ಜ್ ಶೀಟ್‌ನಲ್ಲಿ ಹೆಸರಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಜೊತೆಗೆ ಐಪಿಸಿ ಸೆಕ್ಷನ್ ೧೨೦-ಬಿ (ಅಪರಾಧದ ಪಿತೂರಿ) ೨೦೧ ಮತ್ತು ೪೨೦ ನ್ನು ಸಿಬಿಐ ಉಲ್ಲೇಖಿಸಿದೆ. ಪ್ರಕರಣದಲ್ಲಿ ದೊಡ್ಡ ಪಿತೂರಿ ಮತ್ತು ಇತರ ಆರೋಪಿಗಳ ಪಾತ್ರವನ್ನು ತನಿಖೆಯಲ್ಲಿ ತೆರೆದಿಡಲಾಗಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ತನಿಖಾ ಸಂಸ್ಥೆ ತಿಳಿಸಿದೆ. ನವೆಂಬರ್ ೨೫, ೨೦೨೨ ರಂದು ಸಿಬಿಐ ಕೊನೆಯ ಚಾರ್ಜ್ ಶೀಟ್ ಸಲ್ಲಿಸಿತ್ತು. ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ ೨೦೨೧-೨೨ ರ ಅಬಕಾರಿ ನೀತಿಯು ಕೆಲವು ಡೀಲರ್‌ಗಳಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಆರೋಪಿಸಲಾಗಿದೆ. "ಅಬಕಾರಿ ನೀತಿಯಲ್ಲಿ ಮಾರ್ಪಾಡುಗಳು, ಪರವಾನಗಿದಾರರಿಗೆ ಅನಪೇಕ್ಷಿತ ಅನುಕೂಲಗಳನ್ನು ವಿಸ್ತರಿಸುವುದು, ಪರವಾನಗಿ ಶುಲ್ಕದಲ್ಲಿ ಮನ್ನಾ, ಅನುಮೋದನೆಯಿಲ್ಲದೆ ಎಲ್-೧ ಪರವಾನಗಿ ವಿಸ್ತರಣೆ ಇತ್ಯಾದಿ ಸೇರಿದಂತೆ ಅಕ್ರಮಗಳನ್ನು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈಜಲು ತೆರಳಿದ್ದ ಐವರು ಮಕ್ಕಳು ಸಾವು

ಮಂಡ್ಯ, ಏ. ೨೫: ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರನ್ನು ಹನ್ಸಿಯಾ ಬೇಗಂ, ಮಹತಾಬ್, ತಸ್ಮಿಯಾ, ಅಶ್ರಫ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ನೀಲಸಂದ್ರದ ನಿವಾಸಿಗಳಾದ ಮಕ್ಕಳು, ರಂಜಾನ್ ಹಬ್ಬ ಆಚರಿಸಲು ಮಂಡ್ಯದ ಹಳ್ಳಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ನಾಲೆಗೆ ಆಟವಾಡಲೆಂದು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಕ್ಕಳಿಗೆ ಶಾಲೆಗೆ ರಜೆಯಿದ್ದ ಕಾರಣ ಕುಟುಂಬ ಸಮೇತ ನೆಂಟರ ಮನೆಗೆ ಬಂದಿದ್ದರು. ಈ ವೇಳೆ, ಮನೆಗೆ ಬಂದಿದ್ದ ಎಲ್ಲರೂ ಎರಡು ಕಾರಿನಲ್ಲಿ ಬಸರಾಳು ಬಳಿ ಇರುವ ಕಾವೇರಿ ನಾಲೆಗೆ ಈಜಲು ಹೋಗಿದ್ದಾರೆ. ಈಜಲೆಂದು ನೀರಿಗೆ ಧುಮುಕಿದಾಗ ಅವಘಡ ಸಂಭವಿಸಿದೆ.