ಸಿದ್ದಾಪುರ, ಏ. ೨೫ : ಮಂಗಳವಾರದAದು ಗಾಳಿ ಮಳೆಗೆ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿ ಮನೆಯವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲ್ಲಿಹುದಿಕೇರಿಯ ಗ್ರಾಮದಲ್ಲಿ ನಡೆದಿದೆ. ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಕಚೇರಿಯ ಸಮೀಪದಲ್ಲಿ ವಾಸವಿರುವ ಕುಮಾರ ಎಂಬವರ ಮನೆಯ ಮೇಲ್ಭಾಗಕ್ಕೆ ಮರವೊಂದು ಬಿದ್ದಿದ್ದು, ಗೋಡೆ ಬಿರುಕು ಬಿಟ್ಟಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.