ಸೋಮವಾರಪೇಟೆ, ಏ. ೨೬: ಕುಶಾಲನಗರ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಸೋಮವಾರಪೇಟೆ ೩೩ಕೆವಿ ವಿದ್ಯುತ್ ವಿತರಣಾ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೨೭ ಮತ್ತು ೨೯ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ಸೋಮವಾರಪೇಟೆ ವಿದ್ಯುತ್ ಉಪಕೇಂದ್ರದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಗೌಡಳ್ಳಿ, ಶಾಂತಳ್ಳಿ, ಐಗೂರು, ಕರ್ಕಳ್ಳಿ, ಸೋಮವಾರಪೇಟೆ, ಗಣಗೂರು, ಬಾಣಾವರ, ಅಬ್ಬೂರುಕಟ್ಟೆ, ದೊಡ್ಡಮಳ್ತೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.