ಕಣಿವೆ, ಏ. ೨೬: ಬಸವೇಶ್ವರರು ರಚಿಸಿರುವ ವಚನಗಳ ಸಾರವನ್ನರಿತು ಅದರಂತೆ ನಡೆದದ್ದೇ ಆದಲ್ಲಿ ಅತ್ಯಂತ ಸಂಸ್ಕಾರಯುತ ಹಾಗೂ ಆರೋಗ್ಯವಂತ ಸಮಾಜವನ್ನು ಕಾಣಬಹುದಾಗಿದೆ ಎಂದು ಹುಣಸೂರು ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ ಹೇಳಿದರು.

ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಕುಶಾಲನಗರದ ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳು ಬಸವಾದಿ ಶರಣರ ವಚನಗಳನ್ನು ಓದಿ ಅರ್ಥೈಸಿಕೊಂಡು ಸಜ್ಜನರಾಗಬೇಕೆಂದು ಕರೆ ನೀಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ತಾಲೂಕು ಅಧಿಕಾರಿ ಸ್ವಾಮಿ ಮಾತನಾಡಿ, ಬಸವಾದಿ ಶರಣರು, ಸಾಧು ಸಂತರನ್ನು ಮುಂಜಾನೆ ನೆನೆಯುವ ಮೂಲಕ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.

ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್. ಮೂರ್ತಿ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಮೊದಲಾದ ಮಹನೀಯರ ಜೀವನ ಸಾಧನೆಗಳನ್ನು ಇಂದಿನ ವಿದ್ಯಾರ್ಥಿಗಳು ಅರಿಯುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆAದರು. ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ, ಉದ್ಯಮಿ ಪಾಣತ್ತಲೆ ಗಿರೀಶ್, ವಸತಿ ನಿಲಯದ ಮೇಲ್ವಿಚಾರಕಿ ಕರುಣಾಕ್ಷಿ ಇದ್ದರು. ಇದೇ ಸಂದರ್ಭ ವಿದ್ಯಾರ್ಥಿನಿಯರಿಂದ ಬಸವೇಶ್ವರರ ವಚನಗಳ ಗಾಯನ ಸ್ಪರ್ಧೆ ನಡೆಯಿತು. ವಿದ್ಯಾರ್ಥಿನಿ ವಿದ್ಯಾ ಪ್ರಾರ್ಥಿಸಿ, ನಮಿತಾ ಸ್ವಾಗತಿಸಿ, ಭವ್ಯ ವಂದಿಸಿದರು.