ಕೂಡಿಗೆ: ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮಡಿಕೇರಿ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಭೇಟಿ ನೀಡಿ ಮತಯಾಚನೆ ಮಾಡಿದರು.
ಹುದುಗೂರು, ಬ್ಯಾಡಗೊಟ್ಟ, ಸೀಗೆಹೊಸೂರು, ಕೂಡುಮಂಗಳೂರು, ಕೂಡ್ಲೂರು, ಬಸವನತ್ತೂರು, ಮಾದಲಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ, ಉಪಾಧ್ಯಕ್ಷೆ ಮೋಹಿನಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಬಿಜೆಪಿ ಪ್ರಮುಖ ಬಿ.ಬಿ. ಭಾರತೇಶ್, ಶಕ್ತಿ ಕೇಂದ್ರದ ಅಧ್ಯಕ್ಷ ಕೆ.ಟಿ. ಗಿರೀಶ್, ವಿವಿಧ ಗ್ರಾಮಗಳ ಬೂತ್ ಅಧ್ಯಕ್ಷರುಗಳು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಆಮ್ ಆದ್ಮಿ ಪಾರ್ಟಿಯಿಂದ ಪ್ರಚಾರಮಡಿಕೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಪಿ. ಬೋಪಣ್ಣ ಪರ ಪ್ರಚಾರ ನಡೆಯಿತು.
ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ವಿವಿಧ ಮನೆ ಮನೆಗಳಿಗೆ ತೆರಳಿ ಮತಯಾಚಿಸಿದರು. ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.
ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಪೃಥ್ವಿ, ಮಾಜಿ ಅಧ್ಯಕ್ಷ ಎಂ.ಕೆ.ಅಪ್ಪಯ್ಯ, ಪ್ರಮುಖರಾದ ತೋಮಸ್ ಹಾಗೂ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ನಾಪಂಡ ಮುತ್ತಪ್ಪ ಅವರಿಂದ ಮತಯಾಚನೆ ಕೂಡಿಗೆ: ಮಡಿಕೇರಿ ವಿಧಾನಸಭಾ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರಿಂದ ಕೂಡಿಗೆ ವ್ಯಾಪ್ತಿಯಲ್ಲಿ ಮತಯಾಚನೆ ನಡೆಯಿತು.
ಈ ಸಂದರ್ಭ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.
ರಂಜನ್ ಪರ ಪುತ್ರ ಡಾ. ಕಾರ್ಯಪ್ಪ ಪ್ರಚಾರ ಸೋಮವಾರಪೇಟೆ: ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಎಂ.ಪಿ. ಅಪ್ಪಚ್ಚು ರಂಜನ್ ಅವರ ಪರ, ಪುತ್ರ ಡಾ. ಎಂ.ಎ. ಕಾರ್ಯಪ್ಪ ಅವರು ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದರು.
ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಕೊಡ್ಲಿಪೇಟೆ ಪಟ್ಟಣದ ಅಂಗಡಿ ಮುಂಗಟ್ಟುಗಳು, ಮನೆ ಮನೆಗಳಿಗೆ ತೆರಳಿ ಕಳೆದ ೫ ವರ್ಷಗಳಲ್ಲಿ ರಂಜನ್ ಅವರು ಕೈಗೊಂಡಿರುವ ಕ್ಷೇತ್ರಾಭಿವೃದ್ಧಿ ಕಾರ್ಯಗಳ ಮಾಹಿತಿ ಪತ್ರಕವನ್ನು ನೀಡಿ, ಈ ಬಾರಿಯೂ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಡಾ. ಕಾರ್ಯಪ್ಪ ಅವರೊಂದಿಗೆ ಸ್ಥಳೀಯ ಮುಖಂಡರಾದ ಭಗವಾನ್, ನಾಗರಾಜು, ಕೆಂಚೇಶ್ವರ, ಸುಮಾ ಸುದೀಪ್, ಜೆ.ಸಿ. ಶೇಖರ್, ಜಲಜಾ ಶೇಖರ್, ಹೆಚ್.ಎನ್. ತಂಗಮ್ಮ, ಹೆಚ್.ಸಿ. ರಾಮಕೃಷ್ಣ, ಎಸ್.ಎ. ಪ್ರತಾಪ್, ಶಾಂತಳ್ಳಿ ರವಿ, ದುಷ್ಯಂತ್ಕುಮಾರ್ ಸೇರಿದಂತೆ ಇತರರು ಮತಯಾಚಿಸಿದರು.