ಕುಶಾಲನಗರ, ಏ. ೨೬: ಕುಶಾಲನಗರ-ಕೊಪ್ಪ ಗಡಿಭಾಗದ ಚುನಾವಣಾ ವಾಹನ ತಪಾಸಣಾ ಕೇಂದ್ರದಲ್ಲಿ ದಾಖಲೆ ಇಲ್ಲದ ೧.೦೫ ಲಕ್ಷ ರೂಗಳನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ. ಕೊಪ್ಪ ಕಡೆಯಿಂದ ಬೈಕಿನಲ್ಲಿ ಹಣ ಸಾಗಾಟ ಮಾಡುತ್ತಿದ್ದ ವೇಳೆ ಅಧಿಕಾರಿ ಸಿಬ್ಬಂದಿ ಗಳು ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.