ಮಡಿಕೇರಿ, ಏ. ೨೭: ಮಡಿಕೇರಿ ಸರಕಾರಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಮುತ್ತ ಎಂಬ ವೃದ್ಧರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಇಲಾಖೆಯನ್ನು ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ.

ತಾ. ೧೯ರಂದು ಶ್ರೀಮಂಗಲ ಠಾಣಾ ವ್ಯಾಪ್ತಿಯ ಬೆಳ್ಳೂರು ಗ್ರಾಮದ ವ್ಯಕ್ತಿ ಮುತ್ತ (೭೦) ಎಂಬವರು ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಇವರನ್ನು ಯಾರೋ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಆಸ್ಪತ್ರೆಯಿಂದ ಸ್ಥಳೀಯ ಗ್ರಾ.ಪಂ. ಸದಸ್ಯರ ಗಮನಕ್ಕೆ ತರಲಾಗಿದ್ದು, ಅವರು ಶ್ರೀಮಂಗಲ ಪೊಲೀಸರಿಗೆ ದೂರು ನೀಡಿದ್ದಾರೆ. ಇದರಂತೆ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಸಂಪರ್ಕಿಸಲು (ದೂ.೨೪೬೨೪೬, ೯೪೮೦೮೦೪೯೬೦) ಪೊಲೀಸ್ ಪ್ರಕಟಣೆ ಕೋರಿದೆ. ಮೃತ ವ್ಯಕ್ತಿ ಮುತ್ತ ಅವರ ಮೃತದೇಹ ಮಡಿಕೇರಿ ಆಸ್ಪತ್ರೆಯ ಶವಾಗಾರದಲ್ಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ.