ಕೂಡಿಗೆ, ಏ. ೨೭: ಜಾತ್ಯತೀತ ಜನತಾದಳ ಮಡಿಕೇರಿ ವಿಧಾನಸಭಾ ಚುನಾವಣಾ ಕ್ಷೇತ್ರದ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರ ಪರವಾಗಿ ಶಿರಂಗಾಲದಿAದ ಕುಶಾಲನಗರದವರೆಗೆ ಬೈಕ್ ಜಾಥಾ ಕಾರ್ಯಕ್ರಮ ನಡೆಯಿತು.
ಬೈಕ್ ಜಾಥಾಕ್ಕೆ ಹಾಸನ ಹಾಲು ಒಕ್ಕೂಟದ ಕೊಡಗು ಜಿಲ್ಲೆಯ ನಿರ್ದೇಶಕ ಹಾಗೂ ಕೂಡುಮಂಗಳೂರು ಸಹಕಾರಿ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಚಾಲನೆ ನೀಡಿದರು.
ನಂತರ ಮಾತನಾಡಿ, ಕಳೆದ ೨೫ ವರ್ಷಗಳಿಂದಲೂ ಸಮಾಜ ಸೇವೆಯಲ್ಲಿ ತೊಡಗಿರುವ ನಾಪಂಡ ಮುತ್ತಪ್ಪ ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುತ್ತಾರೆ. ತಮ್ಮ ಸೇವೆಗೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಾಪಂಡ ಮುತ್ತಪ್ಪ ಮಾತನಾಡಿ, ಈ ಬಾರಿ ಅಭಿವೃದ್ಧಿಯ ಅಭ್ಯುದಯಕ್ಕಾಗಿ, ಜಿಲ್ಲೆಯ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸೇವೆ ಮಾಡಲು ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಕುಮಾರಸ್ವಾಮಿ ಅವರ ಕೈ ಬಲಪಡಿಸಲು ಸಹಕಾರ ನೀಡುವಂತೆ ಕೋರಿದರು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ. ಗಣೇಶ್ ಮಾತನಾಡಿ, ಈ ಬಾರಿ ಮುತ್ತಪ್ಪ ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುತ್ತಾರೆ. ತಮ್ಮ ಸೇವೆಗೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಾಪಂಡ ಮುತ್ತಪ್ಪ ಮಾತನಾಡಿ, ಈ ಬಾರಿ ಅಭಿವೃದ್ಧಿಯ ಅಭ್ಯುದಯಕ್ಕಾಗಿ, ಜಿಲ್ಲೆಯ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸೇವೆ ಮಾಡಲು ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಕುಮಾರಸ್ವಾಮಿ ಅವರ ಕೈ ಬಲಪಡಿಸಲು ಸಹಕಾರ ನೀಡುವಂತೆ ಕೋರಿದರು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ. ಗಣೇಶ್ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚು ಜಯಗಳಿಸಿ, ರಾಜ್ಯದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸುವರು. ಅವರ ಅವಧಿಯಲ್ಲಿ ಜಾರಿಗೆ ತಂದ ಯೋಜನೆ ಇಂದಿಗೂ ಗ್ರಾಮಾಂತರ ಪ್ರದೇಶಗಳಲ್ಲಿ ಹಚ್ಚಹಸಿರಾಗಿವೆ. ಜಿಲ್ಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಈ ಬಾರಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸುತ್ತಾರೆ ಎಂದರು.
ಈ ಸಂದರ್ಭ ಯುವ ಘಟಕದ ಅಧ್ಯಕ್ಷ ಸಿ.ಎಲ್. ವಿಶ್ವ, ಅಲ್ಪಸಂಖ್ಯಾತ ಘಟಕದ ಇಸಾಖ್ ಖಾನ್ ಹಾಗೂ ಇತರರು ಪಾಲ್ಗೊಂಡಿದ್ದರು.