ವೀರಾಜಪೇಟೆ, ಏ. ೨೭: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವೀರಾಜಪೇಟೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕೇಂದ್ರದ ಅರೆಸೇನಾ ಪಡೆ ಹಾಗೂ ಪೊಲೀಸರಿಂದ ಪಥಸಂಚಲನ ನಡೆಯಿತು.

ಈ ಸಂದರ್ಭ ಎಎಸ್‌ಪಿ, ಕೆ.ಎಸ್. ಸುಂದರ್‌ರಾಜ್, ವೀರಾಜಪೇಟೆ ಡಿವೈಎಸ್‌ಪಿ ಆರ್. ಮೋಹನ್ ಕುಮಾರ್, ವೃತ್ತನಿರೀಕ್ಷಕ ಬಿ.ಎಸ್. ಶಿವರುದ್ರ, ನಗರ ಠಾಣಾಧಿಕಾರಿ ಮದನ್ ಕುಮಾರ್ ಹಾಗೂ ಗ್ರಾಮಾಂತರ ಠಾಣಾಧಿಕಾರಿ ರವಿಕುಮಾರ್ ಸೇರಿದಂತೆ ಕೇಂದ್ರದ ಅರೆಸೇನಾಪಡೆ ಸಿಬ್ಬಂದಿ ಪಾಲ್ಗೊಂಡಿದ್ದರು.