ಮಡಿಕೇರಿ, ಏ. ೨೭: ಭಾರತ ಚುನಾವಣಾ ಆಯೋಗವು ಮೇ ೧೦ ರಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನ ನಿಗದಿಪಡಿಸಿದೆ. ಈ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೧೯೫೧ ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ ೧೩೫(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆ ೧೯೬೩ ಕಲಂ ೩(ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿದೆ.
ಸಂವಿಧಾನಾತ್ಮಕ ಹಕ್ಕಾದ ಮತ ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ ನಿಯೋಜಕರು ಅನುವು ಮಾಡಿ ಕೊಡಬೇಕಾಗಿದೆ. ಆದ್ದರಿಂದ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಈ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲ ವಾಗುವಂತೆ ವೇತನ ಸಹಿತ ರಜೆ ನೀಡುವಂತೆ ತಿಳಿಸಿದೆ. ತಪ್ಪಿದಲ್ಲಿ ಸಂಬAಧಪಟ್ಟ ಸಂಸ್ಥೆ/ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.