ಮಡಿಕೇರಿ, ಏ. ೨೭: ಕೊಡಗು ಜಿಲ್ಲೆಯಲ್ಲಿ ಅಲ್ಪಸಂಖ್ಯಾತರು ಜಾತ್ಯತೀತ ಜನತಾದಳ ಪರವಾಗಿ ಈ ಬಾರಿ ಬೆಂಬಲ ವ್ಯಕ್ತಪಡಿಸುತ್ತಿದ್ದು, ಅಲ್ಪಸಂಖ್ಯಾತರು ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸೀರ್ ಮೂರ್ನಾಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಷ್ಟಿçÃಯ ಪಕ್ಷಗಳು ಅಲ್ಪಸಂಖ್ಯಾತರನ್ನು ಕೇವಲ ವೋಟ್‌ಗಾಗಿ ಬಳಕೆ ಮಾಡುತ್ತಿವೆೆ.

ಅಲ್ಪಸಂಖ್ಯಾತರಿಗೆ ಯಾವುದೇ ಉನ್ನತ ಹುದ್ದೆ ರಾಷ್ಟಿçÃಯ ಪಕ್ಷಗಳು ನೀಡುತ್ತಿಲ್ಲ. ಜೆಡಿಎಸ್ ಅಲ್ಪಸಂಖ್ಯಾತರಿಗೆ ಅತೀ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ.

ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಗಳಾಗಿರುವ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯಾಕೆ ಟಿಕೆಟ್ ನೀಡುತ್ತಿಲ್ಲ ಎಂದು ಜಾಸೀರ್ ಮೂರ್ನಾಡು ಪ್ರಶ್ನಿಸಿದ್ದಾರೆ.