ಸೋಮವಾರಪೇಟೆ, ಏ. ೨೮: ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಚೌಡ್ಲು ಗ್ರಾಮದ ಜಾನಕಿ ವೆಂಕಟೇಶ್ ನೇಮಕಗೊಂಡಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಈ ನೇಮಕ ಮಾಡಿದ್ದಾರೆ. ಜೆಡಿಎಸ್ ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿದ್ದ ಜಾನಕಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ