ಕೂಡಿಗೆ, ಏ. ೨೮: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾನೆ.
ಕೂಡುಮಂಗಳೂರು ಗ್ರಾಮದ ನಿವಾಸಿ ಮಲ್ಲೇಶಾಚಾರ್ ಅವರ ಪುತ್ರ ಪ್ರತಾಪ್ (೩೨) ಮೃತ ಯುವಕ. ಕಳೆದ ಮಂಗಳವಾರ ಅರಕಲಗೂಡು ಬಳಿ ನಡೆದ ರಸ್ತೆ ಅಪಘಾತದಲ್ಲಿ ಪ್ರತಾಪ್ ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾನೆ.