ಮಡಿಕೇರಿ, ಏ. ೨೮: ಜಾತ್ಯತೀತ ಜನತಾದಳ ಪಕ್ಷದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಾಪಂಡ ಮುತ್ತಪ್ಪ ಇಂದು ಮಡಿಕೇರಿ ನಗರದಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗ ರೊಂದಿಗೆ ಮತಯಾಚನೆ ಮಾಡಿದರು. ನಗರದ ಮುಖ್ಯರಸ್ತೆ ಹಾಗೂ ಬಡಾವಣೆಗಳಲ್ಲಿ ಪ್ರಚಾರ ಕಾರ್ಯ ನಡೆಸುವ ಮೂಲಕ ಮತಯಾಚನೆ ಮಾಡಿದರು. ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.