ಮುಳ್ಳೂರು, ಏ. ೨೯: ಸಮೀಪದ ಕೊಡ್ಲಿಪೇಟೆ ಹೇಮಾವತಿ ರೋಟರಿ ಸಂಸ್ಥೆ ವತಿಯಿಂದ ಬ್ಯಾಡಗೊಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡಲಾಯಿತು.
ರೋಟರಿ ಸಂಸ್ಥೆಯ ಜಿಲ್ಲಾ ರಾಜ್ಯಪಾಲ ಪ್ರಕಾಶ್ ಕಾರಂತ್ ಕೊಡ್ಲಿಪೇಟೆ ಹೇಮಾವತಿ ರೋಟರಿ ಸಂಸ್ಥೆಗೆ ಭೇಟಿ ನೀಡಿದ ಹಿನ್ನೆಲೆ ಬ್ಯಾಡಗೊಟ್ಟ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡಿದರು. ಈ ಸಂದರ್ಭ ಕೊಡ್ಲಿಪೇಟೆ ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ. ಯತೀಶ್, ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ, ಬ್ಯಾಡಗೊಟ್ಟ ಗ್ರಾ.ಪಂ. ಸದಸ್ಯ ಎಂ.ಎA. ಹನೀಫ್, ಎಸ್ಡಿಎಂಸಿ ಅಧ್ಯಕ್ಷೆ ಶ್ವೇತಾ ಧರ್ಮಪ್ಪ, ರೋಟರಿ ಜಿಲ್ಲಾ ಉಪ ರಾಜ್ಯಪಾಲ ಎಸ್.ಕೆ. ಸತೀಶ್, ರೋಟರಿ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.