ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ
ಬೆಂಗಳೂರು, ಏ. ೨೯: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವAತೆಯೇ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿAದು ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು. ನೈಸ್ ರಸ್ತೆ ಜಂಕ್ಷನ್ ನಿಂದ ಸುಮಾರು ೫.೩೦ ಕಿಲೋಮೀಟರ್ ದೂರ ಮಾಗಡಿ ರಸ್ತೆಯ ಸುಮ್ಮನಹಳ್ಳಿಯವರೆಗೂ ತೆರೆದ ವಾಹನದಲ್ಲಿ ಮೋದಿ ರೋಡ್ ಶೋ ನಡೆಸಿದರು. ಬಿಜೆಪಿ ಹಿರಿಯ ಮುಖಂಡರಾದ ಡಿ.ವಿ. ಸದಾನಂದಗೌಡ ಹಾಗೂ ಛಲವಾದಿ ನಾರಾಯಣ ಸ್ವಾಮಿ ಮೋದಿ ಅವರಿಗೆ ಸಾಥ್ ನೀಡಿದರು.
ಮೇ ೨ರಂದು ರಾಹುಲ್ ಗಾಂಧಿ ಅರ್ಜಿ ಅಂತಿಮ ವಿಚಾರಣೆ
ಅಹಮದಾಬಾದ್, ಏ. ೨೯: ಮೋದಿ ಉಪನಾಮ ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಗೆ ತಡೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಅವರ ಪರಿಷ್ಕರಣೆ ಅರ್ಜಿಯ ವಿಚಾರಣೆ ಇಂದು ಗುಜರಾತ್ ಹೈಕೋರ್ಟ್ನಲ್ಲಿ ಪ್ರಾರಂಭವಾಯಿತು. ಈ ವೇಳೆ ರಾಹುಲ್ ಪರ ವಕೀಲರು ಶಿಕ್ಷೆಗೆ ತಡೆಯಾಜ್ಞೆ ನೀಡಲು ಆರು ಮೂಲಭೂತ ಆಧಾರಗಳನ್ನು ಮಂಡಿಸಿದರು. ಕೆಳ ನ್ಯಾಯಾಲಯದಿಂದ ಎರಡು ವರ್ಷಗಳ ಶಿಕ್ಷೆಯನ್ನು ಪಡೆದ ನಂತರ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವದಿಂದ ಅನರ್ಹ ಗೊಳಿಸಲಾಯಿತು. ಈ ಪ್ರಕರಣದ ಮುಂದಿನ ವಿಚಾರಣೆ ಮೇ ೨ರಂದು ನಡೆಯಲಿದೆ. ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರು ವಿಚಾರಣೆ ನಡೆಸಿದ್ದು ಈ ವೇಳೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ರಾಹುಲ್ ಪರ ತಮ್ಮ ವಾದವನ್ನು ಮಂಡಿಸಿದ್ದು ಶಿಕ್ಷೆಗೆ ತಡೆ ನೀಡುವಂತೆ ಒತ್ತಾಯಿಸಿದರು.
ಗಾಲ್ವಾನ್ ಹೀರೋ ಪತ್ನಿ ಸೇನಾ ಅಧಿಕಾರಿಯಾಗಿ ನೇಮಕ
ನವದೆಹಲಿ, ಏ. ೨೯: ೨೦೨೦ ರಲ್ಲಿ ಗಾಲ್ವಾನ್ ಘರ್ಷಣೆಯಲ್ಲಿ ಹುತಾತ್ಮರಾದ ನಾಯಕ್ ದೀಪಕ್ ಸಿಂಗ್ ಅವರ ಪತ್ನಿ ರೇಖಾ ಸಿಂಗ್ ಅವರನ್ನು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನೇಮಕ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ರೇಖಾ ಸಿಂಗ್ ಅವರನ್ನು ಪೂರ್ವ ಲಡಾಖ್‌ನ ಗಡಿ ನಿಯಂತ್ರಣ ರೇಖೆ(ಎಲ್‌ಎಸಿ) ಉದ್ದಕ್ಕೂ ಮುಂಚೂಣಿ ಬೇಸ್‌ನಲ್ಲಿ ನಿಯೋಜಿಸಲಾಗಿದ್ದು, ಚೆನ್ನೈ ಮೂಲದ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ (ಒಟಿಎ) ಒಂದು ವರ್ಷದ ತರಬೇತಿಯನ್ನು ಶನಿವಾರ ಪೂರ್ಣಗೊಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಬಿಹಾರ ರೆಜಿಮೆಂಟ್‌ನ ೧೬ನೇ ಬೆಟಾಲಿಯನ್‌ಗೆ ಸೇರಿದ್ದ ನಾಯಕ್ ದೀಪಕ್ ಸಿಂಗ್ ಅವರಿಗೆ ಮರಣೋತ್ತರವಾಗಿ ೨೦೨೧ರಲ್ಲಿ ವೀರ ಚಕ್ರವನ್ನು ನೀಡಿ ಗೌರವಿಸಲಾಗಿದೆ.
ಕ್ರೆöÊಮಿಯಾ ತೈಲ ಡಿಪೋ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕೀವ್, ಏ. ೨೯: ಕ್ರೆöÊಮಿಯಾ ತೈಲ ಡಿಪೋ ಮೇಲೆ ಉಕ್ರೇನ್‌ನ ೨ ಡ್ರೋನ್‌ಗಳು ದಾಳಿ ಮಾಡಿದ್ದು, ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ರಷ್ಯಾ ಅಧಿಕಾರಿ ಮಾಹಿತಿ ನೀಡಿದ್ದಾರೆ. ಕ್ರೆöÊಮಿಯಾದ ಬಂದರು ನಗರವಾದ ಸೆವಾಸ್ಟೊಪೋಲ್‌ನ ಮಾಸ್ಕೋದ ಗವರ್ನರ್ ಮಿಖಾಯಿಲ್ ರಜ್ವೊಜಾಯೆವ್ ತಮ್ಮ ಟೆಲಿಗ್ರಾಮ್ ಚಾನೆಲ್‌ನಲ್ಲಿ ಬೆಂಕಿಯ ವೀಡಿಯೋಗಳು ಮತ್ತು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಶತ್ರುಪಡೆಯ ಎರಡು ಡ್ರೋನ್ ಗಳು ತೈಲ ಡಿಪೋ ಮೇಲೆ ದಾಳಿ ನಡೆಸಿವೆ. ಈ ದಾಳಿಯಲ್ಲಿ ೪ ತೈಲ ಟ್ಯಾಂಕ್‌ಗಳು ಸುಟ್ಟುಹೋಗಿದೆ. ಕ್ರೆöÊಮಿಯಾದ ಗವರ್ನರ್ ಸೆರ್ಗೆಯ್ ಆಕ್ಸಿಯೊನೊವ್ ಪ್ರಕಾರ, ಮೂರನೇ ಡ್ರೋನ್ ಅನ್ನು ಆಕಾಶದಿಂದ ಹೊಡೆದುರುಳಿಸಲಾಗಿದ್ದರೆ, ರೇಡಿಯೊ-ಎಲೆಕ್ಟಾçನಿಕ್ ವಿಧಾನಗಳ ಮೂಲಕ ಇನ್ನೊಂದನ್ನು ನಿಷ್ಕಿçಯಗೊಳಿಸಲಾಗಿದೆ. ರಷ್ಯಾ ಉಕ್ರೇನ್‌ನಲ್ಲಿ ೨೦ಕ್ಕೂ ಹೆಚ್ಚು ಕ್ರೂಸ್ ಕ್ಷಿಪಣಿಗಳು ಮತ್ತು ಎರಡು ಡ್ರೋನ್‌ಗಳನ್ನು ಹಾರಿಸಿ ಕನಿಷ್ಟ ೨೩ ಜನರನ್ನು ಹತ್ಯೆ ಮಾಡಿದ ಮರುದಿನ ಕ್ರೈಮಿಯಾದಲ್ಲಿ ಈ ಘಟನೆ ನಡೆದಿದೆ.