ಮಡಿಕೇರಿ, ಏ. ೨೮: ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಹಣ ಬಲದಿಂದ ಎದುರಿಸುತ್ತಿದೆ ಎಂದು ಆರೋಪಿಸಿರುವ ಶಾಸಕ, ಬಿಜೆಪಿ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಬಿಜೆಪಿ ಅಭಿವೃದ್ಧಿ ಆಧಾರದಲ್ಲಿ ಜನರ ಬಳಿ ಮತಯಾಚನೆ ಮಾಡುತ್ತಿದೆ ಎಂದು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಇಬ್ಬರು ಬಿಜೆಪಿ ಶಾಸಕರುಗಳು ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇವೆ. ಮಳೆಯಿಂದ ಮನೆಕಳೆದುಕೊಂಡವರಿಗೆ, ಅಪಾಯದಂಚಿನಲ್ಲಿ ಮನೆ ಇದ್ದವರಿಗೆ ಸುಸಜ್ಜಿತ ಮನೆಗಳನ್ನು ಒದಗಿಸುವ ಕೆಲಸವನ್ನು ಮಾಡಿದ್ದೇವೆ. ಕೊರೊನಾ, ಪ್ರಕೃತಿ ವಿಕೋಪದಂತಹ ಸಂಕಷ್ಟದ ಸಂದರ್ಭಗಳಲ್ಲಿ ಜನರ ನೋವಿಗೆ ಸ್ಪಂದಿಸಿದ್ದೇವೆ. ಕೊರೊನಾ ವೇಳೆ ಕಿಟ್ ಹಂಚುವುದರೊAದಿಗೆ ಮೃತಪಟ್ಟವರ ಶವ ಸಂಸ್ಕಾರ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ಮೋದಿಯವರ ಚಿಂತನೆಯAತೆ ‘ಸೇವಾ ಹೀ ಸಂಘಟನ್’ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಿದ್ದೇವೆ.

ಆದರೆ ಕಾಂಗ್ರೆಸ್ ಜಿಲ್ಲೆಯ ಯಾವುದೇ ಸಮಸ್ಯೆಗಳಿಗೂ ಸ್ಪಂದನ ನೀಡಿಲ್ಲ ಎಂದು ದೂರಿದ ಅವರು ಇದೀಗ ಹಣ ಬಲದೊಂದಿಗೆ ಹಣ ಚೆಲ್ಲುತ್ತಾ ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದ್ದು; ನಾವು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಮತಯಾಚನೆ ಮಾಡುತ್ತಿದ್ದೇವೆ ಎಂದರು. ನಮ್ಮ ಕಾರ್ಯಕರ್ತರುಗಳು ನಮ್ಮ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಪ್ರತಿ ಮನೆ ಮನೆಗಳಿಗೆ ತೆರಳಿ ಜನರ ಮುಂದಿಡುವ

ಕೆಲಸ ಮಾಡುತ್ತಿದ್ದಾರೆ ಎಂದು

ಅಪ್ಪಚ್ಚು ರಂಜನ್ ಹೇಳಿದರು. ಬೆಳೆ ಹಾನಿ ಪರಿಹಾರವನ್ನು ಪಾರದರ್ಶಕವಾಗಿ ರೈತರಿಗೆ ತಲುಪಿಸುವ ಕೆಲಸವನ್ನು ಮಾಡಲಾಗಿದೆ.

ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸಲಾಗಿದೆ; ಮಡಿಕೇರಿ ನಗರಸಭೆ ಸೇರಿದಂತೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ಸೂಕ್ತ ಅನುದಾನ ಮಂಜೂರು ಮಾಡಿಸಿ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗಿದೆ.

(ಮೊದಲ ಪುಟದಿಂದ) ಮಡಿಕೇರಿಯ ೪೫೦ ಬೆಡ್‌ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾರ್ಯವೂ ನಡೆಯುತ್ತಿದೆ. ಕುಡಿಯುವ ನೀರು, ರಸ್ತೆ, ಬೆಳಕು ಇವುಗಳನ್ನು ಜನರಿಗೆ ಒದಗಿಸುವದಕ್ಕಾಗಿ ಅನುದಾನ ಕೊಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡಲಾಗಿದೆ.

ರಾಜ್ಯ ಸರ್ಕಾರ ಕೊಡವ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜನಾಂಗಗಳಿಗೂ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದೆ. ಮಡಿಕೇರಿಯಲ್ಲಿ ೫ ಕೋಟಿ ವೆಚ್ಚದಲ್ಲಿ ಗ್ರೇಟರ್ ರಾಜಾಸೀಟ್ ಯೋಜನೆ ಪೂರ್ಣಗೊಳಿಸಲಾಗಿದೆ. ಕೋಟೆ ಸಂರಕ್ಷಣೆಗೆ ಕ್ರಮಕೈಗೊಳ್ಳಲಾಗಿದೆ. ಟೂರಿಸ್ಟ್ ಕಾರಿಡಾರ್ ಎಂಬ ಯೋಜನೆಯನ್ನು ತಯಾರಿಸಲಾಗಿದ್ದು, ಪ್ರವಾಸಿಗರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಚಿಂತನೆ ನಡೆಸಲಾಗಿದೆ. ಮೈಸೂರಿನಿಂದ ಗುಡ್ಡೆಹೊಸೂರಿಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಹಣ ಬಿಡುಗಡೆ ಆಗಿದೆ. ಏರ್‌ಪೋರ್ಟ್ ನಿರ್ಮಾಣಕ್ಕೂ ಜಾಗ ಗುರುತು ಮಾಡಲಾಗಿದೆ. ಈ ಎಲ್ಲಾ ಪ್ರಗತಿ ಕಾರ್ಯಗಳನ್ನು ಮುಂದಿಟ್ಟು ಬಿಜೆಪಿ ಚುನಾವಣೆ ಎದುರಿಸಲಿದೆ ಎಂದು ಅಪ್ಪಚ್ಚುರಂಜನ್ ಹೇಳಿದರು.

ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳು ಕೊಡಗಿಗೆ ಪಿಕ್‌ನಿಕ್‌ಗೆ ಬರುವವರಾಗಿದ್ದು, ಇಲ್ಲಿನ ಸಮಸ್ಯೆಗಳ ಬಗ್ಗೆ ಅವರುಗಳಿಗೆ ಅರಿವಿಲ್ಲ ಎಂದು ರಂಜನ್ ಟೀಕಿಸಿದರು. ತಾ. ೨೯ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಮಡಿಕೇರಿಯ ಚೌಡೇಶ್ವರಿ ದೇವಾಲಯದಿಂದ ಜಿ.ಟಿ. ವೃತ್ತದವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ರೋಡ್ ಶೋ ನಡೆಯಲಿದೆ ಎಂದು ಅವರು ಮಾಹಿತಿಯಿತ್ತರು.

ಬಿಜೆಪಿ ವಕ್ತಾರ ಮಹೇಶ್ ಜೈನಿ ಮಾತನಾಡಿ, ಕಾಂಗ್ರೆಸ್ ಜಿಲ್ಲೆಯಲ್ಲಿ ಜಾತೀಯ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಇದು ಕೊಡಗಿನಲ್ಲಿ ನಡೆಯುವುದಿಲ್ಲ. ಅಪ್ಪಚ್ಚುರಂಜನ್ ಅವರು ಅತ್ಯಧಿಕ ಮತಗಳಿಂದ ಜಯ (ಮೊದಲ ಪುಟದಿಂದ) ಮಡಿಕೇರಿಯ ೪೫೦ ಬೆಡ್‌ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾರ್ಯವೂ ನಡೆಯುತ್ತಿದೆ. ಕುಡಿಯುವ ನೀರು, ರಸ್ತೆ, ಬೆಳಕು ಇವುಗಳನ್ನು ಜನರಿಗೆ ಒದಗಿಸುವದಕ್ಕಾಗಿ ಅನುದಾನ ಕೊಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡಲಾಗಿದೆ.

ರಾಜ್ಯ ಸರ್ಕಾರ ಕೊಡವ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜನಾಂಗಗಳಿಗೂ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದೆ. ಮಡಿಕೇರಿಯಲ್ಲಿ ೫ ಕೋಟಿ ವೆಚ್ಚದಲ್ಲಿ ಗ್ರೇಟರ್ ರಾಜಾಸೀಟ್ ಯೋಜನೆ ಪೂರ್ಣಗೊಳಿಸಲಾಗಿದೆ. ಕೋಟೆ ಸಂರಕ್ಷಣೆಗೆ ಕ್ರಮಕೈಗೊಳ್ಳಲಾಗಿದೆ. ಟೂರಿಸ್ಟ್ ಕಾರಿಡಾರ್ ಎಂಬ ಯೋಜನೆಯನ್ನು ತಯಾರಿಸಲಾಗಿದ್ದು, ಪ್ರವಾಸಿಗರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಚಿಂತನೆ ನಡೆಸಲಾಗಿದೆ. ಮೈಸೂರಿನಿಂದ ಗುಡ್ಡೆಹೊಸೂರಿಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಹಣ ಬಿಡುಗಡೆ ಆಗಿದೆ. ಏರ್‌ಪೋರ್ಟ್ ನಿರ್ಮಾಣಕ್ಕೂ ಜಾಗ ಗುರುತು ಮಾಡಲಾಗಿದೆ. ಈ ಎಲ್ಲಾ ಪ್ರಗತಿ ಕಾರ್ಯಗಳನ್ನು ಮುಂದಿಟ್ಟು ಬಿಜೆಪಿ ಚುನಾವಣೆ ಎದುರಿಸಲಿದೆ ಎಂದು ಅಪ್ಪಚ್ಚುರಂಜನ್ ಹೇಳಿದರು.

ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳು ಕೊಡಗಿಗೆ ಪಿಕ್‌ನಿಕ್‌ಗೆ ಬರುವವರಾಗಿದ್ದು, ಇಲ್ಲಿನ ಸಮಸ್ಯೆಗಳ ಬಗ್ಗೆ ಅವರುಗಳಿಗೆ ಅರಿವಿಲ್ಲ ಎಂದು ರಂಜನ್ ಟೀಕಿಸಿದರು. ತಾ. ೨೯ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಮಡಿಕೇರಿಯ ಚೌಡೇಶ್ವರಿ ದೇವಾಲಯದಿಂದ ಜಿ.ಟಿ. ವೃತ್ತದವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ರೋಡ್ ಶೋ ನಡೆಯಲಿದೆ ಎಂದು ಅವರು ಮಾಹಿತಿಯಿತ್ತರು.

ಬಿಜೆಪಿ ವಕ್ತಾರ ಮಹೇಶ್ ಜೈನಿ ಮಾತನಾಡಿ, ಕಾಂಗ್ರೆಸ್ ಜಿಲ್ಲೆಯಲ್ಲಿ ಜಾತೀಯ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಇದು ಕೊಡಗಿನಲ್ಲಿ ನಡೆಯುವುದಿಲ್ಲ. ಅಪ್ಪಚ್ಚುರಂಜನ್ ಅವರು ಅತ್ಯಧಿಕ ಮತಗಳಿಂದ ಜಯ