ಮಡಿಕೇರಿ, ಏ. ೩೦: ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ೨೨೪ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಲು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ನಿರ್ಧರಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸದಸ್ಯ ಇಂದೂಧರ ಹೊನ್ನಾಪುರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡಲು ನಿರ್ಧರಿಸಿದೆ ಎಂದರು.
ಸದಸ್ಯ ಎಂ. ಸೋಮಶೇಖರ್ ಮಾತನಾಡಿ, ಸಮಿತಿ ರಾಜ್ಯವ್ಯಾಪಿ ಪ್ರವಾಸ ಕೈಗೊಂಡಿದ್ದು, ನಾಲ್ಕು ವಿಭಾಗಕ್ಕೆ ನಾಲ್ಕು ತಂಡಗಳನ್ನು ರಚಿಸಿ ಕಾಂಗ್ರೆಸ್ ಪರ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಮಿತಿ ಸದಸ್ಯರಾದ ಜೀವನಳ್ಳಿ ವೆಂಕಟೇಶ್, ಜಿಗಣಿ ಶಂಕರ್ ಹಾಗೂ ವಿ. ನಾಗರಾಜ್ ಉಪಸ್ಥಿತರಿದ್ದರು.