ಮಡಿಕೇರಿ, ಏ. ೨೯: ವೀರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಅಲಿ ಕುಟ್ಟ ಭಾಗದಲ್ಲಿ ಪ್ರಚಾರದ ಮೂಲಕ ಮತಯಾಚನೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ವೀರಾಜಪೇಟೆ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ವೀರಾಜಪೇಟೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ. ಎಚ್.ಡಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಗೆ ನೀಡಿರುವ ಕೊಡುಗೆಗಳ ಬಗ್ಗೆ ಜನರ ಸ್ಮರಿಸುತ್ತಿದ್ದಾರೆ ಎಂದರು.

ಈ ಸಂದರ್ಭ ಜೆಡಿಎಸ್ ಮುಖಂಡರಾದ ಮಜೀದ್ ಚೋಕಂಡಳ್ಳಿ, ಸೈಫು ಚಾಮಿಯಾಲ್, ಆಲಿ ಎಮ್ಮೆಮಾಡು, ರಶೀದ್, ಆಸಿಫ್, ಕುಟ್ಟ ಜೆಡಿಎಸ್ ಮುಖಂಡರಾದ ರನ್ನಿ ಇದ್ದರು.