ಮಡಿಕೇರಿ, ಏ. ೩೦: ಮೇ ೧೦ ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದಂದು ತಪ್ಪದೆ ಅರ್ಹರೆಲ್ಲರೂ ಮತದಾನ ಮಾಡುವಂತಾಗಲು ‘ನಮ್ಮ ನಡೆ ಮತಗಟ್ಟೆಯ ಕಡೆಗೆ’ ಕಾರ್ಯಕ್ರಮ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಭಾನುವಾರ ಜಾಥಾ ನಡೆಯಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿ.ಪಂ. ಸಿಇಒ ಡಾ. ಎಸ್. ಆಕಾಶ್ ಅವರು ಮೇ ೧೦ ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದಂದು ಅರ್ಹರೆಲ್ಲರೂ ಮತ ಹಕ್ಕು ಚಲಾಯಿಸಬೇಕು ಎಂದು ಕೋರಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆ ನಿಟ್ಟಿನಲ್ಲಿ ಅರ್ಹರು ತಪ್ಪದೆ ಮತ ಚಲಾಯಿಸಬೇಕು ಎಂದು ಅವರು ಹೇಳಿದರು.
(ಮೊದಲ ಪುಟದಿಂದ)
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ. ಬೇಬಿಮ್ಯಾಥ್ಯು ಮಾತನಾಡಿ ಮತದಾನಕ್ಕೆ ಅರ್ಹರಾಗಿರುವ ಎಲ್ಲರೂ ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಪ್ರಜಾಪ್ರಭುತ್ವ ಬಲಪಡಿಸಲು ಮುಂದಾಗಬೇಕು ಎಂದು ಕೋರಿದರು.
ಕೊಡಗು ಜಿಲ್ಲೆಯ ಎಲ್ಲೆಡೆ ಮತದಾನದ ಜಾಗೃತಿಯನ್ನು ವಿವಿಧ ರೀತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಅಧ್ಯಕ್ಷರ ಸಲಹೆಯಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮೇ ೫ ರಂದು ನಗರದಲ್ಲಿ ಮತದಾರರ ಜಾಗೃತಿ ಜಾಥವನ್ನು ಆಯೋಜಿಸಲಾಗುತ್ತಿದೆ ಎಂದರು.
ಜಾಥಾವು ಮಂಗೇರಿರ ಮುತ್ತಣ್ಣ ವೃತ್ತ, ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ವೃತ್ತದ ಮೂಲಕ ಹಿಲ್ ರಸ್ತೆಯಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತಲುಪಿತು.
ವಿಧಾನಸಭಾ ಚುನಾವಣೆಯ ಜಿಲ್ಲಾ ರಾಯಭಾರಿ ಕೆ.ರವಿಮುತ್ತಪ್ಪ, ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ರಾಜಗೋಪಾಲ್, ನವೀನ್, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ. ವಿಸ್ಮಯಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎA. ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ, ಜಿಲ್ಲಾ ಸ್ಥಾನಿಕ ಆಯುಕ್ತರಾದ ಎಚ್.ಆರ್.ಮುತ್ತಪ್ಪ, ಡೈಸಿ, ಸಿ.ಪಿ.ಕುಟ್ಟಪ್ಪ, ವಿಲ್ಪçಡ್ ಕ್ರಾಸ್ತ, ಕೆ.ಯು.ರಂಜಿತ್, ಕೆ.ಬಿ. ಉಷಾರಾಣಿ, ಪ್ರಸನ್ನ, ವಿನಯಿ ಜಾಯ್ಸ್, ವಸಂತ್ ಕುಮಾರ್, ಸರೋಜಿನಿ ದೇವಿ, ಬೋಪಣ್ಣ, ಬೂತ್ ಮಟ್ಟದ ಅಧಿಕಾರಿಗಳಾದ ಸುಮತಿ, ಬಷೀರ್ ಇತರರು ಇದ್ದರು.
ಧ್ವಜಾರೋಹಣ: ನಮ್ಮ ನಡೆ ಮತಗಟ್ಟೆ ಕಡೆಗೆ ಪ್ರಯುಕ್ತ ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಭಾನುವಾರ ಧ್ವಜಾರೋಹಣ ಕಾರ್ಯಕ್ರಮ ಜರುಗಿತು.
ಆ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ. ಸಿಇಒ ಡಾ.ಎಸ್. ಆಕಾಶ್ ಅವರು ನಗರದ ಹಿಲ್ ರಸ್ತೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.
ಸೆಕ್ಟರ್ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳ ನೇತೃತ್ವದಲ್ಲಿ ಆಯಾಯ ಮತಗಟ್ಟೆ ವ್ಯಾಪ್ತಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಜರುಗಿತು.
ರಂಗೋಲಿ ಸ್ಪರ್ಧೆ: ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರ ಶಿಕ್ಷಣ ಮತ್ತು ಜಾಗೃತಿ (ಸ್ವೀಪ್) ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಸ್ತಿçÃಶಕ್ತಿ ಒಕ್ಕೂಟಗಳ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ರಂಗೋಲಿ ಸ್ಪರ್ಧಾ ಕಾರ್ಯಕ್ರಮವು ಜರುಗಿತು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ. ಸಿಇಒ ಡಾ. ಎಸ್. ಆಕಾಶ್ ಅವರು ರಂಗೋಲಿ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ತಿçÃಶಕ್ತಿ ಒಕ್ಕೂಟದ ಅಧ್ಯಕ್ಷೆ ರೆಹನಾ ಸುಲ್ತಾನ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ. ಬೇಬಿಮ್ಯಾಥ್ಯು ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್, ಸಿಡಿಪಿಒಗಳಾದ ಸೀತಾಲಕ್ಷಿö್ಮ, ಸವಿತಾ ಇತರರು ಇದ್ದರು. ಮಡಿಕೇರಿ ತಾಲೂಕಿನಿಂದ ಸುಮಾರು ೩೦ ಕ್ಕೂ ಹೆಚ್ಚು ಮಹಿಳೆಯರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಮಹಿಳೆಯರು ಬಣ್ಣ ಬಣ್ಣದ ರಂಗೋಲಿ ಬಿಡಿಸಿ ಮತದಾನದ ಮಹತ್ವ ಕುರಿತು ಸಾರಿದರು. ವಿಧಾನಸಭಾ ಚುನಾವಣೆಯ ಜಿಲ್ಲಾ ರಾಯಭಾರಿ ಹಾಗೂ ವಿಶೇಷ ಚೇತನರಾದ ಎಸ್.ಕೆ.ಈಶ್ವರಿ ಅವರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.
ವಿದ್ಯುನ್ಮಾನ ಮತಯಂತ್ರ, ಮತಗಟ್ಟೆ ಕೇಂದ್ರಗಳ ಚಿತ್ರಣ ಒಳಗೊಂಡ ರಂಗೋಲಿ, ಬಣ್ಣ ಮತ್ತು ಪುಷ್ಪದಲ್ಲಿ ಬಿಡಿಸಿದ ರಂಗೋಲಿ ಗಮನ ಸೆಳೆಯಿತು. ೧೮ ವರ್ಷದೊಳಗಿನವರೂ ಕೂಡ ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ರಂಗೋಲಿ ಸ್ಪರ್ಧಾ ತೀರ್ಪುಗಾರರಾಗಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಪತ್ನಿ ರೂಪಶ್ರೀ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಕಾರ್ಯನಿರ್ವಹಿಸಿದರು.
೧೮ ವರ್ಷದೊಳಗಿನ ಮಕ್ಕಳ ಸ್ಪರ್ಧೆಯಲ್ಲಿ ಮಡಿಕೇರಿ ನಗರದ ಮಾನ್ವಿ ಎಸ್. (ಪ್ರಥಮ) ಮೋಕ್ಷಿತ ಕೆ.ಜೆ. (ದ್ವಿತೀಯ) ಹಾಗೂ ರೀಕ್ಷಿತ (ತೃತೀಯ) ಸ್ಥಾನ ಪಡೆದರು.
ಹಾಗೆಯೇ ೧೮ ವರ್ಷ ಮೇಲ್ಪಟ್ಟ ದಿವ್ಯ ಗಾಳಿಬೀಡು (ಪ್ರಥಮ) ಸುಶ್ಮಿತಾ ಟಿ.ಪಿ. (ದ್ವಿತೀಯ) ಹಾಗೂ ರಿವ್ಯ ಎಂ.ಎA. ತೃತೀಯ ಸ್ಥಾನ ಪಡೆದರು. ಮತ್ತು ಎಲ್ಲಾ ಸ್ಪರ್ಧಾರ್ಥಿಗಳಿಗೂ ಸಮಾಧಾನಕರ ಬಹುಮಾನ ನೀಡಲಾಯಿತು.