ಪ್ರಕಾಶ್ ಕಾರಂತ್
ಶನಿವಾರಸAತೆ, ಏ. ೨೯: ರೋಟರಿ ಜಿಲ್ಲೆ ೩೧೮೧ ರ ಪರಿಕಲ್ಪನೆ ಪ್ರಕಾರ ಸಾಮಾನ್ಯ ಜನರ ಆಶೋತ್ತರ ಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಅವಶ್ಯಕತೆಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಹಾಗೂ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯಪ್ರವೃತ್ತರಾಗಿ ಅನುಷ್ಠಾನ ಗೊಳಿಸಲು ಬದ್ಧರಾಗಿದ್ದೇವೆ’ ಎಂದು ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಹೇಳಿದರು.
ಪಟ್ಟಣದ ಖಾಸಗಿ ರೆಸಾರ್ಟ್ ನಲ್ಲಿ ಕೊಡ್ಲಿಪೇಟೆ ಹೇಮಾವತಿ ರೋಟರಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈಗಾಗಲೇ ೪ ಯೋಜನೆಗಳಾದ ಜಲಸಿರಿ, ವನಸಿರಿ, ವಿದ್ಯಾಸಿರಿ ಮತ್ತು ಆರೋಗ್ಯ ಸಿರಿ ಇವುಗಳನ್ನು ರೂಪಿಸಲಾಗಿದೆ. ಈ ಯೋಜನೆಗಳು ಪರಿಸರ ರಕ್ಷಣೆ, ಜನಸಾಮಾನ್ಯರ ಜೀವನ ಉತ್ತಮಗೊಳಿಸುವಲ್ಲಿ ಸಹಕಾರಿಯಾಗುತ್ತವೆ ಎಂಬ ನಂಬಿಕೆಯಿದೆ. ಚಿಕ್ಕ ಘಟಕವಾಗಿದ್ದರೂ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡು ಪ್ರಗತಿಯಲ್ಲಿದೆ. ಶಿಕ್ಷಣ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಹೇಮಾವತಿ ರೋಟರಿ ಸಂಸ್ಥೆ ಕಾರ್ಯೋನ್ಮುಖವಾಗಿ ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಈ ಸಂದರ್ಭ ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಎಸ್.ಕೆ. ಸತೀಶ್, ಜಿಲ್ಲಾ ಕಾರ್ಯದರ್ಶಿ ನಾರಾಯಣ ಹೆಗ್ಡೆ, ಕೊಡ್ಲಿಪೇಟೆ ಹೇಮಾವತಿ ರೋಟರಿ ಸಂಸ್ಥೆ ಅಧ್ಯಕ್ಷ ಬಿ.ಕೆ. ಯತೀಶ್, ಕಾರ್ಯದರ್ಶಿ ಪ್ರಕಾಶ್ ಪ್ರಭು ಉಪಸ್ಥಿತರಿದ್ದರು.
ವೀಕ್ಷಣೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಕೊಡ್ಲಿಪೇಟೆ ಪಟ್ಟಣದಲ್ಲಿ ವಿವಿಧ ಯೋಜನೆಗಳನ್ನು ಉದ್ಘಾಟಿಸಿದರು. ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ಗಳ ವೇಳಾಪಟ್ಟಿ, ಗಣೇಶ ವೃತ್ತದಲ್ಲಿ ಪ್ರಮುಖ ಸ್ಥಳಗಳ ಮಾರ್ಗ ಪಟ್ಟಿ, ಬ್ಯಾಡಗೊಟ್ಟ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ, ದೊಡ್ಡಕೊಡ್ಲಿ ಅಂಗನವಾಡಿಗೆ ನಲಿ-ಕಲಿ ಟೇಬಲ್, ಉಪಕರಣಗಳ ಕೊಡುಗೆ ನೀಡಲಾಯಿತು. ಈ ಸಂದರ್ಭ ಸಂಸ್ಥೆಯ ನಿರ್ದೇಶಕರು, ಸದಸ್ಯರು ಪಾಲ್ಗೊಂಡಿದ್ದರು.